AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ?

2025-26ನೇ ಸಾಲಿನ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ ಅಂದರೆ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಅಗತ್ಯ ಪೂರ್ವಸಿದ್ಧತೆಗಾಗಿ ಮೇ 29ರಿಂದ ಶಾಲೆಗಳ ಪ್ರಾರಂಭಿಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಹಾಗಾದ್ರೆ, ಈ ಬಾರಿ ದಸರಾ ರಜೆ ಎಷ್ಟು? ವೇಳಾಪಟ್ಟಿಯಲ್ಲಿ ಏನೇನಿದೆ ಎನ್ನುವ ವಿವರ ಇಲ್ಲಿದೆ.

ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ?
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Apr 14, 2026 | 4:03 PM

Share

ಬೆಂಗಳೂರು, (ಏಪ್ರಿಲ್ 14) : 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ  ( School Academic year schedule) ಪ್ರಕಟವಾಗಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ.

ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್ 3ರಿಂದ 21, 2026ರವರೆಗೆ ದಸರಾ ರಜೆ ಹಾಗೂ ಏಪ್ರಿಲ್ 11, 2027ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. 2027ರ ಜೂನ್ ಮೊದಲ ವಾರದಲ್ಲೇ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಗೆ ಆದೇಶಿಸಿರುವ ಇಲಾಖೆಯು, ದಾಖಲಾತಿ ಅಭಿಯಾನದ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರಲು ವಿಶೇಷ ಒತ್ತು ನೀಡಿದೆ.

ಇದನ್ನೂ ಓದಿ: Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಅಕ್ಟೋಬರ್ .3 ರಿಂದ ಅ.21ರವರೆಗೆ ದಸರಾ ರಜೆ

ಶಾಲೆಗಳ ಮೊದಲ ಅವಧಿ ಮೇ 29 ರಿಂದ ಅ.2 ರವರೆಗೆ ಮತ್ತು ಎರಡನೇ ಅವಧಿ ಅಕ್ಟೋಬರ್ .22 ರಿಂದ 2027ರ ಏಪ್ರಿಲ್.10ರವರೆಗೆ ನಡೆಯಲಿದೆ. ಇನ್ನು ಅಕ್ಟೋಬರ್ .3 ರಿಂದ ಅ.21ರವರೆಗೆ ದಸರಾ ರಜೆ ಇರಲಿದೆ. . ಹೀಗಾಗಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರ ಒಳಗೆ ಪೂರ್ಣಗೊಳಿಸಬೇಕು, ಶಾಲೆ ಬಿಟ್ಟಿರುವ 6 ವರ್ಷದಿಂದ 18 ವರ್ಷದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ದಾಖಲಾತಿ ಜಾಗೃತಿ ಅಭಿಯಾನವನ್ನು ನಡೆಸಬೇಕು ಎಂದು ತಿಳಿಸಲಾಗಿದೆ.

ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳು

ಶೈಕ್ಷಣಿಕ ವರ್ಷದ ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳಿರಲಿದ್ದು, 245 ಕರ್ತವ್ಯದ ದಿನಗಳೆಂದು ಪರಿಗಣಿಸಲಾಗಿದೆ. ಈ ದಿನಗಳಲ್ಲಿ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳು, ಪಠ್ಯೇತರ ಚಟುವಟಿಕೆಗಳ ನಿರ್ವಹಣೆಗಾಗಿ 24 ದಿನಗಳು, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು, ಶಾಲಾ ಸ್ಥಳೀಯ ರಜೆ 4 ದಿನಗಳು ಮತ್ತು ಕಲಿಕಾ ಪ್ರಕ್ರಿಯೆಗೆ 181 ದಿನಗಳನ್ನು ಮೀಸಲಿಡಲಾಗಿದೆ. ಇನ್ನುಳಿದಂತೆ ದಾಖಲಾತಿ ಆಂದೋಲನ, ಶಾಲಾ ಪ್ರಾರಂಭೋತ್ಸವ ಕುರಿತು ಎಂದಿನಂತೆ ಚಟುವಟಿಕೆಯನ್ನು ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us