ಸರ್ಕಾರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್! 10 ಸಾವಿರ ಶುಲ್ಕ ಹೆಚ್ಚಳ

ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು.

ಸರ್ಕಾರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್! 10 ಸಾವಿರ ಶುಲ್ಕ ಹೆಚ್ಚಳ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on: Dec 02, 2021 | 11:52 AM

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ (Fee) ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಿಢೀರ್ 10 ಸಾವಿರ ರೂಪಾಯಿ ಹೆಚ್ಚಿಸಿದೆ. ಸದ್ಯ ಖಾಸಗಿ ಇಂಜಿನಿಯರ್ ಕಾಲೇಜು ಶುಲ್ಕ ಹೆಚ್ಚಳ ಮಾಡಿಲ್ಲ. ಕಾಲೇಜುಗಳು ಶೇ.30ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಿಸಲ್ಲ ಅಂತ ಸರ್ಕಾರ ಸ್ಪಷ್ಟಪಡಿಸಿತ್ತು. ಆದರೆ ಈಗ ಸರ್ಕಾರಿ ಕಾಲೇಜುಗಳ ಶುಲ್ಕ ಹೆಚ್ಚಿಸಿದೆ.

ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು. ಈಗ 33,810 ರೂಪಾಯಿ ಶುಲ್ಕ ಪಾವತಿ ಮಾಡಬೇಕಿದೆ.

ಪ್ರಸ್ತುತ ಯಾವ ಯಾವ ಕೋಟಾದ ವಿದ್ಯಾರ್ಥಿಗಳಿಗೆ ಶುಲ್ಕ ಎಷ್ಟಿದೆ? * ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 33,810 ರೂ. * ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 43,810 ರೂ. * ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 83,526 ರೂ. * ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 90,060 ರೂ. * ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 90,293 ರೂ.

4 ವರ್ಷಗಳ ಬಳಿಕ ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳವಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಶುಲ್ಕ ಹೆಚ್ಚಿಸಿದೆ.

ಇದನ್ನೂ ಓದಿ

ನಡು ಬೀದಿಯಲ್ಲೇ ಮಹಿಳೆ ಹಿಡಿದು ಕೊರೊನಾ ವ್ಯಾಕ್ಸಿನ್​ ಹಾಕಿಸಿದ ಕುಟುಂಬಸ್ಥರು, ವಿಡಿಯೋ ವೈರಲ್

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು