AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ: ಸರ್ಕಾರ ಆದೇಶ

Birthday Celebrations at Schools: ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ರಾಜ್ಯ ಸರ್ಕಾರವು ಬುಧವಾರ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ: ಸರ್ಕಾರ ಆದೇಶ
ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ: ಸರ್ಕಾರ ಆದೇಶ
ಗಂಗಾಧರ​ ಬ. ಸಾಬೋಜಿ
|

Updated on:Jun 19, 2024 | 10:47 PM

Share

ಬೆಂಗಳೂರು, ಜೂನ್​ 19: ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ (schools) ಹುಟ್ಟುಹಬ್ಬ (birthday) ಆಚರಣೆಯನ್ನು ನಿಷೇಧಿಸಿ ರಾಜ್ಯ ಸರ್ಕಾರವು ಬುಧವಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸತ್ತೋಲೆ ಹೊರಡಿಸಿದೆ.

ಇತ್ತೀಚೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತ್ತಿಲ್ಲ. ಫೆಬ್ರವರಿ 2024 ರಲ್ಲಿ ಹೊರಡಿಸಲಾದ ಆದೇಶದ ಪ್ರಕಾರ ರಾಷ್ಟ್ರೀಯ ರಜಾದಿನಗಳು, ರಾಜ್ಯ ಹಬ್ಬಗಳು ಮತ್ತು ಜಯಂತಿಗಳನ್ನು ಮಾತ್ರ ಆಚರಿಸಲು ಅನುಮತಿ ಇದೆ.

ಸತ್ತೋಲೆನಲ್ಲಿ ಏನಿದೆ?

ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: ಸಾರಿಗೆ ಇಲಾಖೆಯಲ್ಲಿ 24/7 ಕಾಲ್ ಸೆಂಟರ್: ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೊಸ ಪ್ಲಾನ್​

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ. ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.

ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸಧೃಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.

ಇದನ್ನೂ ಓದಿ: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

ಆದರೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಇತ್ಯಾದಿ ಗಣ್ಯವ್ಯಕ್ತಿಗಳು ಅವರ ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:44 pm, Wed, 19 June 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!