ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ ಐಐಎಂ/ ಐಐಎಸ್ ಸಿ/ ಎನ್ ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಿಸಲಾಗಿದೆ. ಹಾಗಾದ್ರೆ, ಎಷ್ಟು ಹೆಚ್ಚಳ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ
ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 07, 2024 | 7:23 PM

ಬೆಂಗಳೂರು, (ನವೆಂಬರ್ 07): ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್​ಸಿ ಹಾಗೂ ಎಸ್​ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ ಐಐಎಂ/ ಐಐಎಸ್ ಸಿ/ ಎನ್ ಐಟಿ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ಲಕ್ಷ‌ದಿಂದ 2 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ಪಿಯುಸಿ ಪರೀಕ್ಷೆಯಲ್ಲಿ 95% ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್​ಮೆಂಟ್ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಸರ್ಕಾರದಿಂದ ಕಾಲೇಜು ಶುಲ್ಕವಾಗಿ ಪಾವತಿಸಲಾಗುತ್ತದೆ.

ಇದನ್ನೂ ಓದಿ: ಕಚೇರಿ, ಆವರಣದಲ್ಲಿ ಧೂಮಪಾನ-ತಂಬಾಕು ಸೇವನೆ ನಿಷೇಧ, ಸಿಬ್ಬಂದಿಗೆ ಸರ್ಕಾರ ಎಚ್ಚರಿಕೆ!

ಹಾಗೇ ಎಂಬಿಬಿಎಸ್ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ. ಪ್ರೋತ್ಸಾಹ ಧನ  ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಪಿಯುಸಿ ಪರೀಕ್ಷೆಯಲ್ಲಿ ಶೇ 95ಕ್ಕೂ ಹೆಚ್ಚು ಅಂಕ ಪಡೆದು, ನೀಟ್‌ನಲ್ಲಿ ಅರ್ಹತೆ ಪಡೆದರೂ ಆಡಳಿತ ಮಂಡಳಿಯ ಕೋಟಾದಡಿ ಕಾಲೇಜು ಶುಲ್ಕ ಕಟ್ಟಲು ಸಾಧ್ಯವಾಗದೆ ಕೆಲವು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಅಲವತ್ತುಕೊಂಡಿದ್ದ ವಿದ್ಯಾರ್ಥಿಗಳು, ಕಾಲೇಜು ಶುಲ್ಕ ಕಟ್ಟಲು ಹಣಕಾಸಿನ ನೆರವು ನೀಡುವಂತೆ ಸಮಾಜ ಕಲ್ಯಾಣ ಸಚಿವರು ಮತ್ತು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ