ಅಂಗನವಾಡಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ: ಸಮವಸ್ತ್ರ- ಪುಸ್ತಕ, ಬ್ಯಾಗ್ ವಿತರಣೆ: ಗೊಂದಲಕ್ಕೆ ತೆರೆ ಎಳೆದ ಸಿಎಂ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಂದುಜೂನ್ 24) ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಎಚ್ಚೆತ್ತ ಸಿಎಂ, ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನ ಕರೆದು ಮಹತ್ವದ ಸಭೆ ನಡೆಸಿದರು. ಅಲ್ಲದೇ ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಚರ್ಚೆಗಳಾದವು ಎನ್ನುವ ವಿವರ ಇಲ್ಲಿದೆ.

ಅಂಗನವಾಡಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ: ಸಮವಸ್ತ್ರ- ಪುಸ್ತಕ, ಬ್ಯಾಗ್ ವಿತರಣೆ: ಗೊಂದಲಕ್ಕೆ ತೆರೆ ಎಳೆದ ಸಿಎಂ
ಸಿದ್ದರಾಮಯ್ಯ ಸಭೆ
Follow us
ರಮೇಶ್ ಬಿ. ಜವಳಗೇರಾ
|

Updated on:Jun 24, 2024 | 6:21 PM

ಬೆಂಗಳೂರು, (ಜೂನ್ 24): ಅಂಗನವಾಡಿ (anganwadi) ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಕಾನ್ವೆಂಟ್‌ ಮಾದರಿಯ ಶಿಕ್ಷಣ ನೀಡಲು ಸರ್ಕಾರ ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬಹುದಿನಗಳ ಬೇಡಿಕೆಯಂತೆ ಕರ್ನಾಟಕದ ಅಂಗನವಾಡಿಗಳಲ್ಲೇ ಖಾಸಗಿ ಶಾಲೆಗಳಂತೆ ಎಲ್‌ಕೆಜಿ. ಯುಕೆಜಿ ಶಿಕ್ಷಣ ಸಿಗಲಿದೆ. ಈ ಮೂಲಕ ಸಿದ್ದರಾಮಯ್ಯ ಅವರು ಇಂದಿನ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ಯರು ಹಾಗೂ ಶಿಕ್ಷಣ ಇಲಾಖೆ ನಡುವೆ ಇದ್ದಂತಹ ಗೊಂದಲವನ್ನು ಬಗೆಹರಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು (ಜೂನ್ 24) ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ಸಿಎಂ ಸಮ್ಮಿಸಿದ್ದಾರೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಯಾರನ್ನೂ ಕೆಲಸದಿಂದ ತೆಗೆಯೋಲ್ಲ ಎಂದ ಹೆಬ್ಬಾಳ್ಕರ್

ಸಭೆ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದೇನು?

ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.

ಇನ್ನು ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌, ಮಹಿಳಾ ಮತ್ತು ಮಕ್ಳಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜಿ.ಸಿ.ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:20 pm, Mon, 24 June 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ