ಹೊಸ ಶಿಕ್ಷಣ ನೀತಿ ಪ್ರಕಾರ ನಾಳೆಯಿಂದಲೇ ಉನ್ನತ ವಿದ್ಯಾಭ್ಯಾಸಕ್ಕೆ ದಾಖಲಾತಿ ಶುರು; ಅಕ್ಟೋಬರ್ 1ರಿಂದ ತರಗತಿಗಳು ಆರಂಭ

ಶಿಕ್ಷಣ ನೀತಿಯಲ್ಲಿ ಕನ್ನಡಕ್ಕೆ ಯಾವ ಧಕ್ಕೆಯೂ ಆಗದು. ಶಿಕ್ಷಣ ನೀತಿ ಜಾರಿ ನಂತರ ಅತಿಥಿ ಉಪನ್ಯಾಸಕರನ್ನು ಕೂಡಾ ಮುಂದುವರೆಸಲಾಗುತ್ತದೆ. ಈ ಬಗ್ಗೆ ಯಾವ ಗೊಂದಲವೂ ಬೇಡ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಪ್ರಕಾರ ನಾಳೆಯಿಂದಲೇ ಉನ್ನತ ವಿದ್ಯಾಭ್ಯಾಸಕ್ಕೆ ದಾಖಲಾತಿ ಶುರು; ಅಕ್ಟೋಬರ್ 1ರಿಂದ ತರಗತಿಗಳು ಆರಂಭ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on:Aug 22, 2021 | 6:39 PM

ಕೊರೊನಾ ದೆಸೆಯಿಂದ ಅಸ್ತವ್ಯಸ್ತಗೊಂಡಿರುವ ಶಿಕ್ಷಣ ಪದ್ಧತಿಯನ್ನು ಸರಿಪಡಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು ಹಂತಹಂತವಾಗಿ ಶಾಲಾ ಕಾಲೇಜುಗಳು ಆರಂಭವಾಗುತ್ತಿವೆ. ಅಕ್ಟೋಬರ್​ ಒಂದನೇ ತಾರೀಖಿನಿಂದ 2021-22ನೇ ಶೈಕ್ಷಣಿಕ ಸಾಲಿನ ಉನ್ನತ ಶಿಕ್ಷಣ ತರಗತಿಗಳು ಆರಂಭವಾಗಲಿದ್ದು, ಅದಕ್ಕೆ ಪೂರಕವಾಗಿ ನಾಳೆಯಿಂದಲೇ ಹೊಸ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ‌ ಶುರುವಾಗಲಿದೆ. ನಾಳೆ ಬೆಳಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಹೊಸ ಶಿಕ್ಷಣ ನೀತಿ ಅನ್ವಯ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ನಾಳೆಯೇ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಕೂಡ ಉದ್ಘಾಟನೆ ಆಗಲಿದ್ದು, ಯುಜಿಸಿ ಮಾರ್ಗಸೂಚಿಯಂತೆ ಅಕ್ಟೋಬರ್​ನಿಂದ ತರಗತಿಗಳು ಆರಂಭವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವಾಲಯ ತಿಳಿಸಿದೆ. ಉನ್ನತ ಶಿಕ್ಷಣಕ್ಕೆ ದಾಖಲಾಗಲು ಬಯಸುವ ವಿದ್ಯಾರ್ಥಿಗಳಿಗೆ ಹೊಸ ಶಿಕ್ಷಣ ನೀತಿಯಿಂದ ಯಾವುದೇ ಗೊಂದಲವಾಗದಂತೆ ನೋಡಿಕೊಳ್ಳಲು ಸೂಕ್ತ ಮಾಹಿತಿಯನ್ನು ಕಾಲೇಜುಗಳಿಂದಲೂ ನೀಡಲಾಗುವುದು ಎಂದು ಇದೇ ವೇಳೆ ತಿಳಿಸಲಾಗಿದೆ.

ಶಿಕ್ಷಣ ನೀತಿಯಲ್ಲಿ ಕನ್ನಡಕ್ಕೆ ಯಾವ ಧಕ್ಕೆಯೂ ಆಗದು. ಶಿಕ್ಷಣ ನೀತಿ ಜಾರಿ ನಂತರ ಅತಿಥಿ ಉಪನ್ಯಾಸಕರನ್ನು ಕೂಡಾ ಮುಂದುವರೆಸಲಾಗುತ್ತದೆ. ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂಬುದು ಸುಳ್ಳು ಸುದ್ದಿ. ಅತಿಥಿ ಉಪನ್ಯಾಸಕರ ಕೆಲಸಕ್ಕೆ ಯಾವುದೇ ತೊಂದರೆ ಇಲ್ಲ. ಈ ಬಗ್ಗೆ ಯಾವ ಗೊಂದಲವೂ ಬೇಡ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳಿಂದ ಸಲಹೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಸ್ಟ್ 17ರಂದು ಕೆಲವು ಸಲಹೆಗಳನ್ನು ನೀಡಿದ್ದರು. ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಸಿಎಂ ಸಲಹೆ ಕೊಟ್ಟಿದ್ದಾರೆ. ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸಲಹೆ, ಸೂಚನೆ ಕೊಟ್ಟಿದ್ದಾರೆ.

ಖಾಸಗಿಯವರ ಸಹಯೋಗ ಪಡೆದುಕೊಳ್ಳಲೂ ಸಹ ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ ನೀಡಿದ್ದಾರೆ. ರಾಜ್ಯದ GER ಶೇಕಡಾ 32 ರಷ್ಟು ಇದ್ದು, ಶೇಕಡಾ 50 ಕ್ಕೆ ಹೆಚ್ಚಿಸುವ ಗುರಿ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪಠ್ಯ ಪರಿಷ್ಕರಣೆ, ಬಿಎಡ್, ಡಿಎಡ್ ಪಠ್ಯ ಪರಿಣಾಮಕಾರಿಯಾಗಿ ಪರಿಷ್ಕರಿಸಿ ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

(Karnataka Higher Education admission to be started from tomorrow according to NEP Classes from October 1st 2021)

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ರಸ್ತೆ ದುರಸ್ತಿಗೆ ಆದ್ಯತೆ ನೀಡಲು ಬಸವರಾಜ ಬೊಮ್ಮಾಯಿ ಸೂಚನೆ 

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಉನ್ನತ ಶಿಕ್ಷಣ ವ್ಯವಸ್ಥೆ ಧ್ವಂಸ, ಜಾರಿ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

Published On - 6:34 pm, Sun, 22 August 21

ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ