Karnataka SSLC Result 2021: ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ. ರಿಸಲ್ಟ್ ನೋಡಲು ಇಲ್ಲಿದೆ ಮಾಹಿತಿ
KSEEB Class 10 Result 2021: ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ನಿನ್ನೆಯೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ಸಿಎಂ ಜೊತ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ.
Karnataka KSEEB SSLC Result 2021 | ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಫಲಿತಾಂಶವನ್ನು (SSLC Result 2021) ಪ್ರಕಟವಾಗಿದೆ. ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳ ಹಾಜರಾತಿಯಾಗಿತ್ತು. ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್ಎಸ್ಎಲ್ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
ಇದನ್ನೂ ಓದಿ: Karnataka SSLC Result 2021: ಶೀಘ್ರದಲ್ಲೇ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ
2nd PU Results: ಮೈಸೂರಿನ 11 ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಫಲಿತಾಂಶ ತಿರಸ್ಕಾರ; ಪೂರಕ ಪರೀಕ್ಷೆಗೆ ಮನವಿ
(Karnataka KSEEB SSLC Result 2021 to be announced on 7th August)
Published On - 11:26 am, Fri, 6 August 21