ಪತ್ರಿಕೋದ್ಯಮ ಪದವೀಧರರಿಗೆ ಸುವರ್ಣಾವಕಾಶ: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ!

ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್ ಅವಕಾಶ ನೀಡುತ್ತಿದೆ. ಮಹಿಳಾ ಆಯವ್ಯಯದಡಿ 20 ಅಭ್ಯರ್ಥಿಗಳಿಗೆ ಪ್ರಾಯೋಗಿಕ ತರಬೇತಿ ಹಾಗೂ ಆರ್ಥಿಕ ಪ್ರೋತ್ಸಾಹಕವಾಗಿ ಸ್ಟೈಪೆಂಡ್ ಸಿಗಲಿದೆ. 2022-26ರ ಬ್ಯಾಚ್‌ನ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 23 ರೊಳಗೆ ಅರ್ಜಿ ಸಲ್ಲಿಸಬಹುದು.

ಪತ್ರಿಕೋದ್ಯಮ ಪದವೀಧರರಿಗೆ ಸುವರ್ಣಾವಕಾಶ: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ!
ಕರ್ನಾಟಕ ಮಾಧ್ಯಮ ಅಕಾಡೆಮಿ

Updated on: Oct 07, 2026 | 2:37 PM

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುವರ್ಣಾವಕಾಶ ಕಲ್ಪಿಸಿದೆ. ಮಹಿಳಾ ಆಯವ್ಯಯದಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಅಯೇಶಾ ಖಾನಂ ಅವರು ತಿಳಿಸಿದ್ದಾರೆ.

ಯಾರಿಗೆ ಅವಕಾಶ?

ಬರವಣಿಗೆಯಲ್ಲಿ ಉತ್ತಮ ಪರಿಣತಿ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧಿಸುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಇಂಟರ್ನ್‌ಷಿಪ್‌ಗೆ ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪತ್ರಿಕೋದ್ಯಮದಲ್ಲಿ ಪದವಿ (Journalism Degree) ಅಥವಾ ಸ್ನಾತಕೋತ್ತರ ಪದವಿ (Post Graduation) ಪಡೆದಿರಬೇಕು. 2022-23, 2023-24, 2024-25 ಹಾಗೂ 2025-26 ನೇ ಶೈಕ್ಷಣಿಕ ವರ್ಷದಲ್ಲಿ ಪಾಸಾದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಈ ಯೋಜನೆಯಡಿ ಒಟ್ಟು 20 ಅಭ್ಯರ್ಥಿಗಳನ್ನು ಇಂಟರ್ನ್‌ಷಿಪ್‌ಗಾಗಿ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ತರಬೇತಿ ಮತ್ತು ಸ್ಟೈಪೆಂಡ್ ಸೌಲಭ್ಯ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಎರಡು ತಿಂಗಳ ಕಾಲ ರಾಜ್ಯದ ವಿವಿಧ ಪ್ರಮುಖ ಮಾಧ್ಯಮ ಸಂಸ್ಥೆಗಳಲ್ಲಿ ಪ್ರಾಯೋಗಿಕ ತರಬೇತಿ (ಇಂಟರ್ನ್‌ಷಿಪ್) ಪಡೆಯುವ ಅವಕಾಶ ಸಿಗಲಿದೆ. ಇಂಟರ್ನ್‌ಷಿಪ್ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಆರ್ಥಿಕ ಪ್ರೋತ್ಸಾಹಕವಾಗಿ ಸ್ಟೈಪೆಂಡ್ (Stipend) ಸಹ ನೀಡಲಾಗುವುದು.

ಇದನ್ನೂ ಓದಿ: ಉದ್ಯಮಿಯಾಗಬೇಕಿದ್ದ ಟೆಕ್ಸ್‌ಟೈಲ್ ಎಂಜಿನಿಯರ್ ಈಗ 174 ಜೀವಗಳ ರಕ್ಷಕ: ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಸಾಹಸಗಾಥೆ ಇಲ್ಲಿದೆ

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು ತಮ್ಮ ವಿವರವಾದ ಸ್ವವಿವರ (Curriculum Vitae / Resume) ಹಾಗೂ ಅಗತ್ಯ ಪೂರಕ ಪ್ರಮಾಣಪತ್ರ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://docs.google.com/forms/d/e/1FAIpQLSfYwla-tbEhbvzUmRvWdsOCn44knMZ7orPgzExhxJsmUxIxlQ/viewform ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಮಾಧ್ಯಮ ಅಕಾಡೆಮಿ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಇಂಟರ್ನ್‌ಷಿಪ್‌ಗೆ ಅರ್ಜಿ ಸಲ್ಲಿಸಲು 2026 ರ ಅಕ್ಟೋಬರ್ 23 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದ ನಂತರ ಬರುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಕಾಡೆಮಿಯ ಅಧ್ಯಕ್ಷರಾದ ಅಯೇಶಾ ಖಾನಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Wed, 7 October 26

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us