2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಕೊನೆ ದಿನಾಂಕ, ಅರ್ಜಿ ಶುಲ್ಕ ಎಷ್ಟು?​ ಇಲ್ಲಿದೆ ಮಾಹಿತಿ

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಕೊನೆ ದಿನಾಂಕ, ಅರ್ಜಿ ಶುಲ್ಕ ಎಷ್ಟು?​ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Apr 10, 2024 | 12:32 PM

ಬೆಂಗಳೂರು, ಏಪ್ರಿಲ್​ 10: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd PUC Exam Result) ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ; ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಮರುಮೌಲ್ಯಮಾಪನ 2024 ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ:

  • ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ
  • ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ
  • ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ
  • ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ

ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ

ರಾಜ್ಯದಾದ್ಯಂತ ಮಾ.1ರಿಂದ ಮಾರ್ಚ್ 22ರವರೆಗೆ 1,124 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಪ್ರಸಕ್ತ ವರ್ಷ 6.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಹಾಜರಾಗಿದ್ದರು. ಮೂರು ಭಾಗಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಫಲಿತಾಂಶ ಪರಿಶೀಲನೆ

  1. karresults.nic.in  ಅಧಿಕೃತ ವೆಬ್ಸೈಟ್​​ಗೆ ಭೇಟಿ ನೀಡಿ.
  2. ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  3. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡಬೇಕು. ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
  4. ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
  5. ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Wed, 10 April 24

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ