2nd PUC Result: ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ; ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

Karnataka 2nd PUC Result: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸುತ್ತಿದೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಆನ್​ಲೈನ್​ನಲ್ಲಿ ನೋಡಬಹುದಾಗಿದೆ.

2nd PUC Result: ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ; ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ
ದ್ವಿತೀಯ ಪಿಯು ಫಲಿತಾಂಶ ಪ್ರಕಟ
Follow us
|

Updated on:Apr 10, 2024 | 10:42 AM

ಬೆಂಗಳೂರು, ಏಪ್ರಿಲ್ 09: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ (Second PU Result) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದಕ್ಷಿಣ ಕನ್ನಡ ಟಾಪ್, ಗದಗ ಜಿಲ್ಲೆಗೆ ಕೊನೆಯ ಸ್ಥಾನ

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ಟಾಪರ್​ಗಳು ಯಾರೆಲ್ಲ?

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್​ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ಪಿಯು ಫಲಿತಾಂಶದ ಲೈವ್ ಇಲ್ಲಿ ನೋಡಿ

ಕಳೆದ ಬಾರಿ ಮೇಲುಗೈ ಸಾಧಿಸಿದ್ದ ವಿದ್ಯಾರ್ಥಿನಿಯರು

ಕಳೆದ ವರ್ಷದ, ಅಂದರೆ 2023 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರು. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳ ಪೈಕಿ ಶೇಕಡಾ 69.05 ರಷ್ಟು ಮಂದಿ ಉತ್ತೀರ್ಣರಾಗಿದ್ದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇಕಡಾ 74.67 ರಷ್ಟಿತ್ತು. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಆನ್​ಲೈನ್​ನಲ್ಲಿ ನೋಡೋದು ಹೇಗೆ? ಇಲ್ಲಿದೆ ವಿವರ

ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:20 am, Wed, 10 April 24

ತಾಜಾ ಸುದ್ದಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ