PUC Admission 2021: ವಿದ್ಯಾರ್ಥಿಗಳೇ ಗಮನಿಸಿ, ಪಿಯು ಪ್ರವೇಶಕ್ಕೆ ಸುತ್ತೋಲೆ ಪ್ರಕಟ; ಅಡ್ಮಿಶನ್ ಮಾಡಿಸಲು ಎಲ್ಲಿಯವರೆಗಿದೆ ಅವಕಾಶ? ಇಲ್ಲಿದೆ ವಿವರ

ಸೆಪ್ಟೆಂಬರ್ 11ರವರೆಗೆ ಪ್ರವೇಶ ಪಡೆದಿಲ್ಲವೆಂದರೆ ₹ 2890 ವಿಶೇಷ ದಂಡ ಪಾವತಿಸಿಯೂ ಪ್ರವೇಶ ಪಡೆದುಕೊಳ್ಳಬಹುದಾಗಿದೆ.

PUC Admission 2021: ವಿದ್ಯಾರ್ಥಿಗಳೇ ಗಮನಿಸಿ, ಪಿಯು ಪ್ರವೇಶಕ್ಕೆ ಸುತ್ತೋಲೆ ಪ್ರಕಟ; ಅಡ್ಮಿಶನ್ ಮಾಡಿಸಲು ಎಲ್ಲಿಯವರೆಗಿದೆ ಅವಕಾಶ? ಇಲ್ಲಿದೆ ವಿವರ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Aug 10, 2021 | 11:13 PM

ಬೆಂಗಳೂರು: ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪಿಯು ಪ್ರವೇಶಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪಿಯು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಆಗಸ್ಟ್ 30ರವರೆಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 1ರಿಂದ 11ರವರೆಗೆ 670 ರೂಪಾಯಿ ವಿಳಂಬ ಶುಲ್ಕ ಪಾವತಿಸಿ ಅಡ್ಮಿಷನ್ ಮಾಡಬಹುದಾಗಿದೆ. ಸೆಪ್ಟೆಂಬರ್ 11ರವರೆಗೆ ಪ್ರವೇಶ ಪಡೆದಿಲ್ಲವೆಂದರೆ ₹ 2890 ವಿಶೇಷ ದಂಡ ಪಾವತಿಸಿಯೂ ಪ್ರವೇಶ ಪಡೆದುಕೊಳ್ಳಬಹುದಾಗಿದೆ.

ನಿನ್ನೆಯಷ್ಟೇ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. sslc.Karnataka.gov.in ನಲ್ಲಿ ಎಸ್‌ಎಸ್ಎಲ್‌ಸಿ ರಿಸಲ್ಟ್ ಲಭ್ಯವಿದೆ. 4,70,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610. ಹಾಗೂ ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.

625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು, 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು, 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಔಟ್ ಆಫ್ ಔಟ್ ಅಂಕ ಪಡೆದ ಮಕ್ಕಳ ಸಂಖ್ಯೆ: ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು, ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆ.

ಇದನ್ನೂ ಓದಿ: 

ಒಂದೇ ವರ್ಷ ಎಸ್​ಎಸ್​ಎಲ್​ಸಿ ಪಾಸ್ ಆದ ಕೊಡಗಿನ ತಾಯಿ, ಮಗ! 

ಕೊನೆ ಅರ್ಧ ಗಂಟೆ ಪರೀಕ್ಷೆ ಆಕ್ಸಿಜನ್ ಸಪೋರ್ಟ್ ಮೇಲಿದ್ದು ಬರೆದ ಈ ತಾಂಡಾ ಹುಡುಗಿ ಎಲ್ಲ 625 ಅಂಕ ಬಾಚಿಕೊಂಡಳು!

(Karnataka PUC admission circular is published How long is the admission Here is the all detail)

Published On - 7:30 pm, Tue, 10 August 21