ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 19 ರಿಂದ ಸಪ್ಟೆಂಬರ್ 3ರ ವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಪರೀಕ್ಷೆ ತಿರಸ್ಕರಿಸಿದ ವಿದ್ಯಾರ್ಥಿಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಜುಲೈ 30ರ ಒಳಗೆ ಮಾಹಿತಿ ಪರೀಕ್ಷಾ ಅರ್ಜಿಗಳನ್ನು ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಜುಲೈ 31ರ ಒಳಗೆ ಪರೀಕ್ಷಾ ಅರ್ಜಿಗಳನ್ನು ಸಲ್ಲಿಸಬೇಕು. ಕೇಂದ್ರ ಕಚೇರಿಗೆ ತಲುಪಿಸಲು ಆಗಸ್ಟ್ 2 ಕೊನೆಯ ದಿನ ಎಂದು ತಿಳಿಸಲಾಗಿದೆ.
ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಜುಲೈ 30 ಒಳಗೆ ಮಾಹಿತಿ ಪಡೆಯಬಹುದು ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಲಿಕ ವೇಳಾಪಟ್ಟಿ ಪ್ರಕಟವಾಗಿದೆ. ದಿನಾಂಕ 19/08/2021 ರಿಂದ 03/09/2021 ರ ವರೆಗೆ ಪರೀಕ್ಷೆ ನಡೆಯಲಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಫಲಿತಾಂಶ ನೀಡಲಾಗಿದೆ ಎಂದು ಹೇಳಿದ್ದಾರೆ. SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಪ್ರತಿಭೆಗೆ ಅನುಗುಣವಾಗಿ ಫಲಿತಾಂಶ ನೀಡಲಾಗಿದೆ. ಪ್ರಾಮಾಣಿಕ ಫಲಿತಾಂಶಕ್ಕೆ ಮುಂದಾಗಿದ್ದೇವೆ. ಫಲಿತಾಂಶವನ್ನು ಮೊಬೈಲ್ಗೆ ಕೂಡ ಕಳಿಸಲಾಗುತ್ತೆ. ಫಲಿತಾಂಶಕ್ಕೆ ಒಪ್ಪಿಗೆ ಇಲ್ಲ ಅಂದ್ರೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Karnataka 2nd PUC Result 2021: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಸುರೇಶ್ ಕುಮಾರ್