AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 14 ಸಾವಿರ ಮಕ್ಕಳು ಶಾಲೆಯಿಂದ ದೂರ: ದಕ್ಷಿಣ ಭಾರತದಲ್ಲಿ ರಾಜ್ಯಕ್ಕೆ 3ನೇ ಸ್ಥಾನ!

ಕರ್ನಾಟಕದಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ದಕ್ಷಿಣ ಭಾರತದಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಶಿಕ್ಷಣ ಸೌಲಭ್ಯಗಳಿದ್ದರೂ ಈ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಶೈಕ್ಷಣಿಕ ಅವಧಿಯಲ್ಲಿ ಸಂಖ್ಯೆ ಅಧಿಕವಾಗಿದೆ. ದೇಶವ್ಯಾಪಿ ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಗುಜರಾತ್, ಅಸ್ಸಾಂ ಮತ್ತು ಉತ್ತರ ಪ್ರದೇಶಗಳು ಅಗ್ರಸ್ಥಾನದಲ್ಲಿವೆ.

ಕರ್ನಾಟಕದಲ್ಲಿ 14 ಸಾವಿರ ಮಕ್ಕಳು ಶಾಲೆಯಿಂದ ದೂರ: ದಕ್ಷಿಣ ಭಾರತದಲ್ಲಿ ರಾಜ್ಯಕ್ಕೆ 3ನೇ ಸ್ಥಾನ!
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on: Dec 28, 2025 | 6:55 AM

Share

ಬೆಂಗಳೂರು, ಡಿಸೆಂಬರ್​ 28: ಉಚಿತ ಶಿಕ್ಷಣದ ಜೊತೆಗೆ ನಾನಾ ಸೌಲಭ್ಯಗಳ ಹೊರತಾಗಿಯೂ ಶಾಲೆಯತ್ತ ಮುಖ ಮಾಡದ ಮಕ್ಕಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದೇಶಾದ್ಯಂತ ಈ ಸಮಸ್ಯೆ ಇದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಇತ್ತೀಚಿಗೆ ಈ ಬಗ್ಗೆ ಅಂಕಿಅಂಶಗಳನ್ನ ಬಹಿರಂಗಗೊಳಿಸಿದೆ. ಆ ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿಯೇ ಮೂರನೇ ಸ್ಥಾನದಲ್ಲಿದೆ.

2025–26ರಲ್ಲಿ ಕರ್ನಾಟಕದಲ್ಲಿ ಒಟ್ಟು 14,087 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅವರಲ್ಲಿ 6,462 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. 2024–25ರಲ್ಲಿ ಈ ಸಂಖ್ಯೆ 9,422 ಇದ್ದು, ಅವರಲ್ಲಿ ಕೇವಲ 115 ಮಂದಿ ಮಾತ್ರ ಹುಡುಗಿಯರಾಗಿದ್ದರು. ಕಳೆದ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಪ್ರಸ್ತುತ ಹೆಚ್ಚಾಗಿದೆ. ದೇಶವ್ಯಾಪಿ ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಗುಜರಾತ್, ಅಸ್ಸಾಂ ಮತ್ತು ಉತ್ತರ ಪ್ರದೇಶಗಳು ಅಗ್ರಸ್ಥಾನದಲ್ಲಿವೆ.

ಇದನ್ನೂ ಓದಿ: ಎಲ್ಲ ತರಗತಿಗೆ ಒಬ್ಬರೇ ಟೀಚರ್​​; ರಾಜ್ಯದಲ್ಲಿವೆ 6,675 ಏಕ ಶಿಕ್ಷಕ ಶಾಲೆಗಳು

ದಕ್ಷಿಣ ಭಾರತದಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದ್ದು, 46,463 ಮಕ್ಕಳು  ಶಾಲೆಯತ್ತ ಇಲ್ಲಿ ಮುಖ ಮಾಡಿಲ್ಲ. ಆ ಪೈಕಿ 17,584 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. ತಮಿಳುನಾಡು ಎರಡನೇ ಸ್ಥಾನದಲ್ಲಿದ್ದು, 19,897 ಮಕ್ಕಳು ಇಲ್ಲಿ ಶಾಲೆಯಿಂದ ಹೊರಗಿದ್ದಾರೆ. ತೆಲಂಗಾಣದಲ್ಲಿ ಈ ಸಂಖ್ಯೆ 4,753 ಇದ್ದು, ಅವರಲ್ಲಿ 2,006 ಹುಡುಗಿಯರು. ಕೇರಳದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಅತಿ ಕಡಿಮೆ ಇದ್ದು, 1,773 ಮಕ್ಕಳು ಮಾತ್ರ ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಶಾಲೆಯಿಂದ ಮಕ್ಕಳು ದೂರ ಉಳಿಯಲು ಕಾರಣ ಏನು?

ಶೌಚಾಲಯಗಳು ಮತ್ತು ಕುಡಿಯುವ ನೀರಿನಂತಹ ಮೂಲಸೌಕರ್ಯದ ಕೊರತೆ, ಶಿಕ್ಷಕರ ಅಭಾವ, ಉಚಿತ ಹಾಗೂ ಕಡ್ಡಾಯ ಶಿಕ್ಷಣ 14 ವರ್ಷ ವಯಸ್ಸಿನವರೆಗೂ ಮಾತ್ರ ಸೀಮಿತವಾಗಿರುವುದು, ಬಾಲ್ಯವಿವಾಹ ಮತ್ತು ಹೆಣ್ಣುಮಕ್ಕಳ ಗರ್ಭಧಾರಣೆ ಮೊದಲಾದ ಕಾರಣಗಳಿಂದ ಸಾವಿರಾರು ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಪ್ರಸ್ತುತ ಕರ್ನಾಟಕದಲ್ಲಿ 46,460 ಶಾಲೆಗಳಿದ್ದು, ಇಂದಿಗೂ ಸುಮಾರು 170 ಶಾಲೆಗಳಲ್ಲಿ ಶೌಚಾಲಯ ಸೌಲಭ್ಯಗಳಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ