Apply Now: ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಇತರ ಕೆಳ ವರ್ಗಗಳ ಕಲ್ಯಾಣಕ್ಕಾಗಿ 5 ಹೊಸ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳು ಹಾಗೂ ವೈದ್ಯಕೀಯ/ಇಂಜಿನಿಯರಿಂಗ್ ನಿಲಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ವೆಚ್ಚವೂ ಸೇರಿವೆ. ಶೈಕ್ಷಣಿಕ ಪ್ರೋತ್ಸಾಹ ಮತ್ತು ಆರ್ಥಿಕ ಸಹಾಯ ಪಡೆಯಲು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

Apply Now: ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Scholarship

Updated on: Oct 29, 2025 | 4:01 PM

ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ (ಎಸ್.ಸಿ.) ಮತ್ತು ಇತರ ಕೆಳ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತದೆ. ಈ ಇಲಾಖೆಯ ಮುಖ್ಯ ಉದ್ದೇಶ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸಹಾಯ, ಶೈಕ್ಷಣಿಕ ಪ್ರೋತ್ಸಾಹ, ಮತ್ತು ವಸತಿ ಸೌಲಭ್ಯಗಳನ್ನು ಒದಗಿಸುವುದು. ಇದೀಗ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ ಸೈಟ್​​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ:

  1. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
  2. ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
  3. ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ.
  4. ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (ಆಡಳಿತ ಮಂಡಳಿ ಕೋಟಾದ ವಿದ್ಯಾರ್ಥಿಗಳಿಗೆ)
  5. ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ನಿಲಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ವೆಚ್ಚ.

ಇದನ್ನೂ ಓದಿ:ಸೈನಿಕ್ ಶಾಲಾ ಪ್ರವೇಶ ಪರೀಕ್ಷಾ ನೋಂದಣಿ ಶೀಘ್ರದಲ್ಲೇ ಮುಕ್ತಾಯ; ಕೂಡಲೇ ಅರ್ಜಿ ಸಲ್ಲಿಸಿ

ಯಾರು ಅರ್ಜಿ ಸಲ್ಲಿಸಬಹುದು?

ಸಾಮಾನ್ಯವಾಗಿ ಈ ಯೋಜನೆಗಳು ಮತ್ತು ಸೌಲಭ್ಯಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ಮೀಸಲಾಗಿವೆ. ನಿರ್ದಿಷ್ಟ ಯೋಜನೆಯನ್ನು ಅವಲಂಬಿಸಿ ಅರ್ಹತಾ ಮಾನದಂಡಗಳು ಬದಲಾಗಬಹುದು. ಹೆಚ್ಚಿನ ಮಾಹಿತಿಗಾಗಿ, ನೀವು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಕರ್ನಾಟಕದ ಜಿಲ್ಲೆಗಳ ವೆಬ್‌ಸೈಟ್‌ಗಳಲ್ಲೂ ಜಿಲ್ಲಾ ಮಟ್ಟದ ಇಲಾಖೆಯ ಮಾಹಿತಿ ಲಭ್ಯವಿದೆ.

ಅಧಿಕೃತ ವೆಬ್​​ಸೈಟ್​​ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್​ ಮಾಡಿ:

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us