Textbook Review Committee: ಪಠ್ಯಪುಸ್ತಕಗಳ ಪುನರ್‌ ಪರಿಷ್ಕರಣೆಗೆ 5 ಸಮಿತಿ ರಚಿಸಿದ ಸರ್ಕಾರ

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಐದು ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದೆ. ಈ ಸಮಿತಿಗಳು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ ಸಮಾಜ ವಿಜ್ಞಾನ ಪಠ್ಯಪುಸ್ತಕಗಳೊಂದಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯ ಪಠ್ಯಪುಸ್ತಕಗಳನ್ನು ಪರಿಶೀಲಿಸಲಿದೆ.

Textbook Review Committee: ಪಠ್ಯಪುಸ್ತಕಗಳ ಪುನರ್‌ ಪರಿಷ್ಕರಣೆಗೆ 5 ಸಮಿತಿ ರಚಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Sep 27, 2023 | 11:10 AM

ಬೆಂಗಳೂರು, ಸೆ.27: ರಾಜ್ಯ ಕಾಂಗ್ರೆಸ್ ಸರ್ಕಾರ (Karnataka Government) ಹೊಸ ಪಠ್ಯಪುಸ್ತಕ ರಚನೆ ಮಾಡಲು ಮುಂದಾಗಿದೆ. ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆ ಮಾಡಿದ್ದ ಕೆಲ ಪಠ್ಯ ಕೈ ಬಿಟ್ಟಿದ್ದ ಕಾಂಗ್ರೆಸ್ ‌ಸರ್ಕಾರ, ಈಗ ಮುಂದಿನ ವರ್ಷದಿಂದ ಹೊಸ ಪಠ್ಯಪುಸ್ತಕ ರಚನೆ ಮಾಡುವುದಕ್ಕೆ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಪರಿಷ್ಕರಣೆ ರದ್ದು ಮಾಡಲಾಗಿದ್ದು ಈಗ ಇಡೀ ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ಸಮಿತಿ ನೇಮಕ ಮಾಡಿದೆ (Textbook Review Committee).

1ರಿಂದ 10 ನೇ ತರಗತಿಗಳ ಸಂಪೂರ್ಣ ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ಐದು ಸಮಿತಿ ರಚನೆ ಮಾಡಿದೆ. ಕನ್ನಡ, ಸಮಾಜ ವಿಜ್ಞಾನ ವಿಷಯಗಳ ಸಂಪೂರ್ಣ ಪಠ್ಯಪುಸ್ತಕ ಪರಿಷ್ಕರಣೆಗೆ ‌ನಿರ್ಧಾರ ಮಾಡಿದೆ. ಪಠ್ಯ ಪುಸ್ತಕ ಪರಿಷ್ಕರಣೆಗೆ 38 ಜನ ತಜ್ಞರ ಸಮಿತಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬರು ಮುಖ್ಯ ಸಂಯೋಜಕರು, 5 ಜನ ಅಧ್ಯಕ್ಷರು, 37 ಜನ ಸದಸ್ಯರನ್ನು ನೇಮಕ ಮಾಡಲಾಗಿದೆ. 3 ತಿಂಗಳಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ವರದಿ ನೀಡಲು‌ ಸೂಚಿಸಲಾಗಿದೆ. 2024-25ನೇ ಸಾಲಿನಿಂದ ಪರಿಷ್ಕೃತ ಪಠ್ಯ ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.

ರಾಷ್ಟ್ರೀಯ ಪಠ್ಯ ಕ್ರಮ ಚೌಕಟ್ಟು 2005 ಅನ್ವಯ ಪಠ್ಯ ಪರಿಷ್ಕರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಿತಿ ನೇಮಕ ಮಾಡಿದೆ. 1-10 ನೇ ತರಗತಿ ಕನ್ನಡ ಪ್ರಥಮ ಭಾಷೆ, ದ್ವೀತಿಯ ಭಾಷೆ, ತೃತೀಯ ಭಾಷೆ ವಿಷಯಗಳ ಪಠ್ಯಪುಸ್ತಕ ಪರಿಷ್ಕರಣೆಗೆ ಸೂಚನೆ ನೀಡಲಾಗಿದೆ. ಇದಲ್ಲದೆ ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡಿದ್ದ 6-10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳ ಪರಿಷ್ಕರಣೆಗೆ ಸೂಚಿಸಲಾಗಿದೆ.

ಇದನ್ನೂ ಓದಿ: Madhu Bangarappa: ಅಧಿಕಾರ ಸ್ವೀಕರಿಸಿದ ಬಳಿಕ ಮೊದಲು ಸಹಿ ಮಾಡಿದ್ದೇ ಪಠ್ಯ ಪರಿಷ್ಕರಣೆಗೆ; ಮಧು ಬಂಗಾರಪ್ಪ

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ‌ ಹೇಗಿದೆ?

ಉತ್ತರ ಕನ್ನಡ ಜಿಲ್ಲೆಯ ಡಾ. ಮಂಜುನಾಥ ಜಿ ಹೆಗಡೆ ಅವರು ಪಠ್ಯಪುಸ್ತಕ ಸಮಿತಿಯ ಮುಖ್ಯ ಸಂಯೋಜಕರು. 1-10ನೇ‌ ತರಗತಿ ಪ್ರಥಮ ಭಾಷೆ ಕನ್ನಡ ವಿಷಯದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಆಂಜನಪ್ಪ ಹಾಗೂ 9 ಜನ ಸದಸ್ಯರಿರಲಿದ್ದಾರೆ.

1-10 ನೇ ತರಗತಿ ದ್ವೀತಿಯ ಭಾಷೆ ಕನ್ನಡ ವಿಷಯಕ್ಕೆ ಚಿಕ್ಕಮಗಳೂರು ಸರ್ಕಾರಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ.‌ H.S.ಸತ್ಯನಾರಾಯಣ ಹಾಗೂ 9 ಜನ ಸದಸ್ಯರನ್ನು ನೇಮಕ ಮಾಡಲಾಗಿದೆ.

9-10ನೇ ತರಗತಿ ತೃತೀಯ ಭಾಷೆ ಕನ್ನಡ ವಿಷಯ ಪರಿಷ್ಕರಣೆಗೆ ದಾವಣಗೆರೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾಗಿರುವ ಡಾ. ಮಂಜಣ್ಣ ಹಾಗೂ 3 ಜನ ಸದಸ್ಯರಿರಲಿದ್ದಾರೆ.

6 ಮತ್ತು 7 ನೇ ತರಗತಿ ಸಮಾಜ ವಿಜ್ಞಾನ ವಿಷಯಕ್ಕೆ ಕಲಬುರಗಿ ಕೇಂದ್ರೀಯ ವಿವಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಕಿರಣ್, 6 ಜನ ಸದಸ್ಯರಿರಲಿದ್ದಾರೆ.

8,9,10ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕಕ್ಕೆ ಬೆಂಗಳೂರು ವಿವಿ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಅಶ್ವಥ್ ನಾರಾಯಣ ಹಾಗೂ 9 ಜನ ಸದಸ್ಯರಿರಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:58 am, Wed, 27 September 23

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್