AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams: ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ ಸಹಾಯವಾಣಿ, ಪರೀಕ್ಷೆ ಬಗ್ಗೆ ಏನೇ ಗೊಂದಲಗಳಿದ್ದರೆ ಕರೆ ಮಾಡಿ

ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆ ಬಗ್ಗೆ ಏನಾದರೂ ಗೊಂದಲ, ಸಂದೇಹಗಳು ಇದ್ದರೆ ಈ ಕೆಳಗೆ ನೀಡಲಾಗಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

SSLC Exams: ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ ಸಹಾಯವಾಣಿ, ಪರೀಕ್ಷೆ ಬಗ್ಗೆ ಏನೇ ಗೊಂದಲಗಳಿದ್ದರೆ ಕರೆ ಮಾಡಿ
ರಮೇಶ್ ಬಿ. ಜವಳಗೇರಾ
|

Updated on:Mar 17, 2023 | 8:10 AM

Share

ಬೆಂಗಳೂರು: ಇದೇ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ (Karnataka SSLC Exams) ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ (Exam Helpline) ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: Karnataka SSLC Exam Time Table: ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಮಾರ್ಚ್ 20 ರಿಂದ 28 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7:30ರ ವರೆಗೆ ಹಾಗೂ ಮಾರ್ಚ್ 26ರಂದು ಬೆಳಗ್ಗೆ 11 ಗಂಟೆಯಿಂದ 6 ಗಂಟೆಯವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಪರೀಕ್ಷೆ ಬಗ್ಗೆ ಗೊಂದಲ, ಸಂದೇಹಗಳು ಇದ್ದರೆ ಮೇಲೆ ನೀಡಲಾಗಿರುವ ಸಹಾಯವಾಣಿಯನ್ನು ಸದುಪಯೋಗ ಪಡೆದುಕೊಳ್ಳಲು ಶಿಕ್ಷಣ ಇಲಾಖೆ ಮನವಿ ಮಾಡಿದೆ.

ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ

ಪರೀಕ್ಷೆಗಳು ಇದೇ ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರಗೆ ನಡೆಯಲಿವೆ.

10ನೇ ತರಗತಿಯವರೆಗೆ (ಎಸ್​ಎಸ್​ಎಲ್​ಸಿ) ಸರ್ಕಾರ ನಿಗದಿಪಡಿಸಿರುವ ಪಠ್ಯಕ್ರಮವನ್ನಷ್ಟೇ ಓದಿ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಮುಗಿದ ನಂತರ ಯಾವ ವಿಭಾಗ ಆರಿಸಿಕೊಳ್ಳಬೇಕೆಂಬ ಗೊಂದಲಕ್ಕೆ ಒಳಗಾಗುತ್ತಾರೆ. ವಾಣಿಜ್ಯ (Commerce), ವಿಜ್ಞಾನ (Science) ಮತ್ತು ಕಲಾ (Arts) ವಿಭಾಗಗಳ ಪೈಕಿ ಯಾವುದನ್ನು ಆರಿಸಿಕೊಳ್ಳಬೇಕು ಎಂಬ ಬಗ್ಗೆ ಹಲವು ಪ್ರಶ್ನೆಗಳು ಮೂಡುತ್ತವೆ. ಈ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ವಿದ್ಯಾರ್ಥಿಯ ವಿದ್ಯಾಭ್ಯಾಸವಷ್ಟೇ ಅಲ್ಲ, ವೃತ್ತಿ ಭವಿಷ್ಯವನ್ನೂ ನಿರ್ಧರಿಸಲಿದೆ. ಹೀಗಾಗಿ ಯಾವ ವಿಭಾಗ ಆರಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿ ಆಪ್ತಸಮಾಲೋಚನೆ ಮಹತ್ವದ ಪಾತ್ರ ನಿರ್ವಹಿಸುತ್ತದೆ.

ಇನ್ನಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:03 am, Fri, 17 March 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್