AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

School Reopening: 9,10ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ; ಮಕ್ಕಳು ಮನೆಯಿಂದಲೇ ಊಟ ತರಬೇಕು, ಪೋಷಕರ ಅನುಮತಿ ಪತ್ರ ಕಡ್ಡಾಯ

ಮಗುವಿಗೆ ಕೊರೊನಾ ಲಕ್ಷಣದ ಇಲ್ಲದಿರುವುದನ್ನು ಕುರಿತು ಪೋಷಕರು ದೃಢಪಡಿಸಬೇಕು ಎಂದು ಗೈಡ್​ಲೈನ್ಸ್​ ತಿಳಿಸಿದೆ.

School Reopening: 9,10ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ; ಮಕ್ಕಳು ಮನೆಯಿಂದಲೇ ಊಟ ತರಬೇಕು, ಪೋಷಕರ ಅನುಮತಿ ಪತ್ರ ಕಡ್ಡಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 16, 2021 | 5:45 PM

Share

ಬೆಂಗಳೂರು: ಆಗಸ್ಟ್ 23ರಿಂದ  9, 10ನೇ ತರಗತಿ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಅಧಿಕೃತ ಗೈಡ್​ಲೈನ್ಸ್​ ಬಿಡುಗಡೆ ಮಾಡಿದೆ. ಪ್ರತಿದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗೆ ಅವಕಾಶ ನೀಡಲಾಗಿದ್ದು, ಶಾಲೆಗೆ ವಿದ್ಯಾರ್ಥಿಗಳು ಮನೆಯಿಂದಲೇ ಊಟ ತರಬೇಕು. ಶಾಲೆಗೆ ಬರುವುದಕ್ಕೆ ಪೋಷಕರ ಅನುಮತಿ ಪತ್ರ ತರಬೇಕು. ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸೋಮವಾರದಿಂದ ಶುಕ್ರವಾರದವರೆಗೆ ಅರ್ಧದಿನ ಅಂದರೆ, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ತರಗತಿ ನಡೆಯಲಿದೆ. ಶನಿವಾರ ಬೆಳಗ್ಗೆ 10ರಿಂದ ಮ.12.50ರವರೆಗೆ ತರಗತಿಗಳು ನಡೆಯಲಿದೆ. ವಿದ್ಯಾರ್ಥಿಗಳಿಗೆ ಭೌತಿಕ ಹಾಜರಾತಿ ಕಡ್ಡಾಯವಿರುವುದಿಲ್ಲ. ಮಗುವಿಗೆ ಕೊರೊನಾ ಲಕ್ಷಣದ ಇಲ್ಲದಿರುವುದನ್ನು ಕುರಿತು ಪೋಷಕರು ದೃಢಪಡಿಸಬೇಕು ಎಂದು ಗೈಡ್​ಲೈನ್ಸ್​ ತಿಳಿಸಿದೆ.

ಊಟದ ವಿರಾಮದ ನಂತರ ಅಪರಾಹ್ನ ಶಾಲೆಗಳ ಶಿಕ್ಷಕರು 8 ನೇ ತರಗತಿ ವಿದ್ಯಾರ್ಥಿಗಳಿಗೆ ದಿ. 10-06-2021 ಸೂತ್ತೋಲೆಯಂತೆ ಪರ್ಯಾಯ ವಿಧಾಯದಲ್ಲಿ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆಗಳನ್ನು ನಡೆಸಲು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. 9 ರಿಂದ 12ರವರೆಗೆ ಮಾತ್ರ ಶಾಲೆ ಆರಂಭವಾಗಲಿದ್ದು, 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ಮಾರ್ಗದ ಮೂಲಕ ಕಲಿಕೆ ಮುಂದುವರೆಸಲು ಸರ್ಕಾರ ತಿಳಿಸಿದೆ.  8ನೇ ಮತ್ತು ಇತರ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ಮಾರ್ಗಗಳಾದ ಅನ್ಲೈನ್ ಹಾಗೂ ಟಿವಿ ಪಾಠಗಳ ಮೂಲಕ ಕಲಿಕಾ ಬೋಧನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಸುಮಾರು ಒಂದು ವರ್ಷದಿಂದ ಶಾಲೆ ಆರಂಭಗೊಳ್ಳಲಿದ್ದು, ಹೀಗಾಗಿ ಶಾಲಾರಂಭಕ್ಕೂ ಮೊದಲು ಸಂಪೂರ್ಣ ಶಾಲೆಯನ್ನು ಸ್ವಚ್ಛಗೊಳಿಸಬೇಕು. ಶಾಲೆಯ ಆವರಣವನ್ನು ಸ್ಯಾನಿಟೈಸ್ ಮಾಡಬೇಕು. ಕುಡಿಯುವ ನೀರಿನ ಸೌಲಭ್ಯ, ಶೌಚಾಲಯಗಳನ್ನು ಸ್ವಚ್ಛಗೊಳಿಸಬೇಕು. ಶಾಲೆಯ ಕೊಠಡಿ, ಅಡುಗೆ ದಾಸ್ತಾನು ಕೊಠಡಿ ಎಲ್ಲವನ್ನೂ ಶುಚಿಗೊಳಿಸಬೇಕು.

ವಿದ್ಯಾರ್ಥಿಗಳು ಅನುಸರಿಸಬೇಕಾದ ಮಾರ್ಗಸೂಚಿ ಸಾಮಾಜಿಕ ಅಂತರ ಕಾಪಾಡುವುದರ ಜತೆಗೆ ಆಗಾಗ ಕೈ ತೊಳೆಯಬೇಕು. ಯೋಗ, ಪ್ರಾಣಾಯಾಮ, ವ್ಯಾಯಾಮವನ್ನು ರೂಢಿ ಮಾಡಿಕೊಳ್ಳಬೇಕು. ಮನೆಯಿಂದಲೇ ಊಟದ ಡಬ್ಬಿ ಹಾಗೂ ಕಾಯಿಸಿ ಆರಿಸಿದ ನೀರನ್ನು ತರಬೇಕು. ಬಿಸಿಯಾದ ಆಹಾರ ಪದಾರ್ಥ ಸೇವಿಸಬೇಕು. ಯಾವುದೇ ಪೆನ್ನು, ನೋಟ್ ಬುಕ್, ನೀರಿನ ಬಾಟಲ್ ಹಂಚಿಕೊಳ್ಳಬಾರದು. ಸಮುದಾಯ ಸಹಭಾಗಿತ್ವದೊಂದಿಗೆ ಶಾಲೆ ನಡೆಸಬೇಕು. ಶಾಲಾ ವಾಹನಗಳಲ್ಲಿಯೂ ಸಹ ಸಾಮಾಜಿಕ ಅಂತರ ಕಾಪಾಡಬೇಕು. ಕೊಠಡಿಗಳಲ್ಲಿ ಎಲ್ಲ ವಸ್ತುಗಳನ್ನು ಸ್ಯಾನಿಟೈಸ್ ಮಾಡಬೇಕು. ಮಕ್ಕಳ ಆಗಮನ ಮತ್ತು ನಿರ್ಗಮನದ ದಾರಿ ಪ್ರತ್ಯೇಕವಾಗಿ ಮಾಡಬೇಕು. ಶಿಕ್ಷಕರು, ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದು ರಜೆ ಪಡೆಯಬೇಕು. ಪುನಃ ಕರ್ತವ್ಯ ಕ್ಕೆ ಹಾಜರಾಗುವ ವೇಳೆ ಮೂರು ದಿನ ಮುಂಚಿತವಾಗಿ ಆರ್ ಟಿ ಪಿಸಿಆರ್ ನಲ್ಲಿ ನೆಗೆಟಿವ್ ರಿಪೋರ್ಟ್ ಇರಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: 

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

Shiradi Ghat: ಶಿರಾಡಿ ಘಾಟ್​ ಓಪನ್; ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ

(Karnataka School Re opening class 9 and 10 Guidelines Here is the rule for children to come to school)

Published On - 5:03 pm, Mon, 16 August 21

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್