ಕೊರೊನಾ ಹೆಚ್ಚಾದರೆ ಶಾಲೆ ಮುಂದುವರೆಸುತ್ತೀರಾ? ಈ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ ಇಲ್ಲಿದೆ

Karnataka School Reopen: ತಜ್ಞರ ಪ್ರಕಾರ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಹೀಗಾಗಿ ಮಕ್ಕಳಿಗೆ ಸೋಂಕು ತಗುಲುವುದು ತುಂಬಾ ಕಡಿಮೆ. ಸೋಂಕು ತಗುಲಿದರೂ ಪರಿಣಾಮ‌ ಕಡಿಮೆ ಆಗುತ್ತೆಂದು ವರದಿಗಳು ತಿಳಿಸಿವೆ ಎಂದು ಹೇಳಿದರು.

ಕೊರೊನಾ ಹೆಚ್ಚಾದರೆ ಶಾಲೆ ಮುಂದುವರೆಸುತ್ತೀರಾ? ಈ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ ಇಲ್ಲಿದೆ
ಶಿಕ್ಷಣ ಸಚಿವ ಬಿಸಿ ನಾಗೇಶ್
Follow us
TV9 Web
| Updated By: guruganesh bhat

Updated on:Aug 24, 2021 | 4:21 PM

ನೆಲಮಂಗಲ: ಕೊರೊನಾ ಹೆಚ್ಚಾದಾಗ ಶಾಲೆ ಮುಂದುವರೆಸುವ ಬಗ್ಗೆ ತೀರ್ಮಾನ ಮಾಡುತ್ತೇವೆ. ನಾವು ಶಿಕ್ಷಣ, ಆರೋಗ್ಯ ಎರಡಕ್ಕೂ ಒತ್ತು ಕೊಡುತ್ತೇವೆ ಎಂದು ನೆಲಮಂಗಲದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಮಾತನಾಡಿದ ಅವರು, ಶಾಲೆಯಿಂದ ಹೊರಬಂದ ಬಳಿಕ ಕೊವಿಡ್ ತಡೆ ನಿಯಮ ಪಾಲನೆ ಆಗುವುದಿಲ್ಲ. ಬಸ್‌ಗಳಲ್ಲಿ, ಹೊರಗೆ ಕೊವಿಡ್ ನಿಯಮ ಪಾಲನೆ ಆಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ತಜ್ಞರ ಪ್ರಕಾರ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಹೀಗಾಗಿ ಮಕ್ಕಳಿಗೆ ಸೋಂಕು ತಗುಲುವುದು ತುಂಬಾ ಕಡಿಮೆ. ಸೋಂಕು ತಗುಲಿದರೂ ಪರಿಣಾಮ‌ ಕಡಿಮೆ ಆಗುತ್ತೆಂದು ವರದಿಗಳು ತಿಳಿಸಿವೆ ಎಂದು ಹೇಳಿದರು.

ಒಂದು ಕಡೆ ನೈಟ್ ಕರ್ಫ್ಯೂ ಮತ್ತೊಂದು ಕಡೆ ಶಾಲೆ ಆರಂಭದ ಕುರಿತೂ ಮಾತನಾಡಿದ ಅವರು, ನೈಟ್ ಕರ್ಫ್ಯೂ‌ಗೂ ಶಾಲೆ ಆರಂಭಕ್ಕೂ ಯಾವುದೇ ಸಂಬಂಧ ಇಲ್ಲ. ಎಲ್ಲಾ ಕಡೆ ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಶಾಲೆ ಆರಂಭಿಸಿ ಎಂದು ಹೇಳಿದ್ದೇವೆ ಎಂದು ಖಚಿತಪಡಿಸಿದರು.

ಈವರ್ಷ ಎಸ್ಎಸ್ಎಲ್‌ಸಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಪಿಯುಸಿಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಇಲ್ಲ. ಪಿಯುಸಿಗೆ ದಾಖಲಾಗುವುದಕ್ಕೆ ಎಲ್ಲ ವ್ಯವಸ್ಥೆ ಮಾಡುತ್ತೇವೆ. 12 ಲಕ್ಷ ವಿದ್ಯಾರ್ಥಿಗಳು ಪಿಯುಸಿಗೆ ದಾಖಲಾಗಬಹುದಾಗಿದೆ. SSLCಯಲ್ಲಿ ಈ ಬಾರಿ 8.75 ಲಕ್ಷ ವಿದ್ಯಾರ್ಥಿಗಳು ಪಾಸ್ ಆಗಿರುವ ಕಾರಣ ಪಿಯುಸಿ ದಾಖಲಾತಿಗೆ ಯಾವುದೇ ತೊಂದರೆ ಇಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

ನಗದು ರಹಿತ ಟಿಕೆಟ್, ಎಲೆಕ್ಟ್ರಾನಿಕ್ ಬಸ್ ಸೌಲಭ್ಯ, ವಿದ್ಯಾರ್ಥಿಗಳಿಗೆ ಆನ್​ಲೈನ್​ನಲ್ಲೇ ಬಸ್ ಪಾಸ್ ವಿತರಣೆಗೆ ಕ್ರಮ: ಸಾರಿಗೆ ಸಚಿವ ಶ್ರೀರಾಮುಲು

TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?

(Karnataka School Reopen Education Minister BC Nagesh answers about covid 19 cases surge)

Published On - 4:15 pm, Tue, 24 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್