School Reopen: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಪ್ರಾರಂಭದ ಕುರಿತು ಮಹತ್ವದ ಮಾಹಿತಿ ನೀಡಿದ ನೂತನ ಶಿಕ್ಷಣ ಸಚಿವ ಬಿ ಸಿ ನಾಗೇಶ್

| Updated By: guruganesh bhat

Updated on: Aug 09, 2021 | 4:49 PM

ಆಗಸ್ಟ್ 23ರಿಂದ 9, 10, 11, 12ನೇ ತರಗತಿ ಆರಂಭವಾಗಲಿದೆ. ಇದೇ ರೀತಿ ಪ್ರಾಥಮಿಕ ತರಗತಿಗಳನ್ನೂ ಆರಂಭಿಸುವ ಕುರಿತು ಸಹ ಸಭೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

School Reopen: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಪ್ರಾರಂಭದ ಕುರಿತು ಮಹತ್ವದ ಮಾಹಿತಿ ನೀಡಿದ ನೂತನ ಶಿಕ್ಷಣ ಸಚಿವ ಬಿ ಸಿ ನಾಗೇಶ್
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಆಗಸ್ಟ್ ತಿಂಗಳ ಕೊ‌ನೆ ವಾರದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಗಡಿ ಜಿಲ್ಲೆಯಲ್ಲಿ ಪರಿಸ್ಥಿತಿ ನೋಡಿಕೊಂಡು ಶಾಲೆ ಪ್ರಾರಂಭಿಸಲಾಗುವುದು. ಶಾಲೆ ಓಪನ್ ( School Reopen) ವಿಳಂಬವಾದರೆ ವಿದ್ಯಾಗಮ ಪ್ರಾರಂಭಿಸುತ್ತೇವೆ ಎಂದು ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಆಗಸ್ಟ್ 23ರಿಂದ 9, 10, 11, 12ನೇ ತರಗತಿ ಆರಂಭವಾಗಲಿದೆ. ಇದೇ ರೀತಿ ಪ್ರಾಥಮಿಕ ತರಗತಿಗಳನ್ನೂ ಆರಂಭಿಸುವ ಕುರಿತು ಸಹ ಸಭೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ
ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು (SSLC Result 2021) ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. ಇಂದು (ಆಗಸ್ಟ್ 9) 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. sslc.Karnataka.gov.in ನಲ್ಲಿ ಎಸ್‌ಎಸ್ಎಲ್‌ಸಿ ರಿಸಲ್ಟ್ ಲಭ್ಯವಿದೆ. 4,70,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610. ಹಾಗೂ ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.

625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು, 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು, 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 

Karnataka SSLC Result 2021 Live: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; 99.9 ಶೇಕಡಾ ರಿಸಲ್ಟ್

Karnataka SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಗೊಂದಲ ಬೇಡ ಈ ಅಂಶಗಳನ್ನು ನೆನಪಿಡಿ

(Karnataka School Reopen Education Minister BC Nagesh said will decide in the meeting held on August last week)