Karnataka School Reopening: ಶಾಲೆ ಆರಂಭ; ಮಕ್ಕಳು, ಪೋಷಕರಿಗೆ ಕಿವಿಮಾತು ಹೇಳಿದ ಸಿಎಂ ಬೊಮ್ಮಾಯಿ

| Updated By: Skanda

Updated on: Aug 22, 2021 | 10:56 PM

ಮಕ್ಕಳ ಸುರಕ್ಷತೆಯ ಜೊತೆಗೆ ಅವರ ಶೈಕ್ಷಣಿಕ ಭವಿಷ್ಯದ ಹಿತಾಸಕ್ತಿಗಳನ್ನೂ ಪರಿಗಣಿಸಿ, ತಜ್ಞರ ಸಲಹೆಗಳಿಗೆ ಅನುಗುಣವಾಗಿ, ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು, ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ಆತಂಕವಿಲ್ಲದೆ ಸರ್ಕಾರದೊಂದಿಗೆ ಸಹಕರಿಸಲು ಕೋರುತ್ತೇನೆ: ಬಸವರಾಜ ಬೊಮ್ಮಾಯಿ

Karnataka School Reopening: ಶಾಲೆ ಆರಂಭ; ಮಕ್ಕಳು, ಪೋಷಕರಿಗೆ ಕಿವಿಮಾತು ಹೇಳಿದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us on

ಕೊರೊನಾ ದೆಸೆಯಿಂದ ಅಸ್ತವ್ಯಸ್ತಗೊಂಡಿರುವ ಶಿಕ್ಷಣ ಪದ್ಧತಿಯನ್ನು ಸರಿದಾರಿಗೆ ತರುವ ಸಲುವಾಗಿ ನಾಳೆಯಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು ಕರ್ನಾಟಕ ಸರ್ಕಾರ ಮೊದಲ ಹೆಜ್ಜೆಯನ್ನು ಇಡುತ್ತಿದೆ. ಈ ವೇಳೆ ಮಕ್ಕಳು, ಪೋಷಕರು, ಶಿಕ್ಷಕರು, ಅಧಿಕಾರಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುರಕ್ಷತೆಗೆ ಆದ್ಯತೆ ನೀಡಿ ಶಾಲೆಗೆ ಬರುವಂತೆ ಸಲಹೆ ನೀಡಿದ್ದಾರೆ. ನಾಳೆಯಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭಗೊಳ್ಳುತ್ತಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದು ಸಲಹೆ ನೀಡುತ್ತೇನೆ ಎಂದು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಿದ್ದಾರೆ.

ಕೊವಿಡ್​ 19 ಆತಂಕದ ನಡುವೆಯೂ ನಾಳೆಯಿಂದ (ಆಗಸ್ಟ್​ 23) ಶಾಲೆಗಳನ್ನು ಆರಂಭಿಸಲು (School Reopening) ಕರ್ನಾಟಕದಲ್ಲಿ ಸಿದ್ಧತೆಗಳು ನಡೆದಿವೆ. ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai), ಮಕ್ಕಳ ಸುರಕ್ಷತೆಯ ಜೊತೆಗೆ ಅವರ ಶೈಕ್ಷಣಿಕ ಭವಿಷ್ಯದ ಹಿತಾಸಕ್ತಿಗಳನ್ನೂ ಪರಿಗಣಿಸಿ, ತಜ್ಞರ ಸಲಹೆಗಳಿಗೆ ಅನುಗುಣವಾಗಿ, ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು, ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ಆತಂಕವಿಲ್ಲದೆ ಸರ್ಕಾರದೊಂದಿಗೆ ಸಹಕರಿಸಲು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಈಗಾಗಲೇ ಮಾರ್ಗಸೂಚಿ ನೀಡಿದ್ದು, ಹೇಗೆಲ್ಲಾ ತಯಾರಿ ಮಾಡಿಕೊಳ್ಳಬೇಕು? ಯಾವೆಲ್ಲಾ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದೆ. ಅದರಂತೆ ಪ್ರಮುಖ ನಿಯಮಗಳು ಇಂತಿವೆ:

1. ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್​ಡೌನ್
2. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯುವಂತಿಲ್ಲ
3. ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಗೆ ಕಳುಹಿಸುವಂತಿಲ್ಲ
4. ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ
5. ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದಿರಬೇಕು
6. ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲೆಗೆ ಬರಬೇಕು
7. ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 72 ಗಂಟೆಗಳ ಅಂತರದಲ್ಲಿ ಪಡೆದ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು
8. ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ
9. ಆನ್ ಲೈನ್ ಹಾಗೂ ಆಫ್ ಲೈನ್ ಎರಡಕ್ಕೂ ಅವಕಾಶ ಸಾಧ್ಯತೆ
10. ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ

ವಿದ್ಯಾರ್ಥಿಗಳೇ ನೆನಪಿಡಿ
ಸಾಮಾಜಿಕ ಅಂತರ ಕಾಪಾಡುವುದರ ಜೊತೆ ಆಗಾಗ ಕೈ ತೊಳೆಯಬೇಕು. ಯೋಗ, ಪ್ರಾಣಾಯಾಮ, ವ್ಯಾಯಾಮವನ್ನು ರೂಢಿ ಮಾಡಿಕೊಳ್ಳಬೇಕು. ಮನೆಯಿಂದಲೇ ಊಟದ ಡಬ್ಬಿ ಹಾಗೂ ಕಾಯಿಸಿ ಆರಿಸಿದ ನೀರನ್ನು ತರಬೇಕು. ಬಿಸಿಯಾದ ಆಹಾರ ಪದಾರ್ಥ ಸೇವಿಸಬೇಕು. ಪೆನ್, ನೋಟ್ ಬುಕ್, ನೀರಿನ ಬಾಟಲ್ ಸೇರಿದಂತೆ ಯಾವುದೇ ವಸ್ತುವನ್ನು ಸಹಪಾಠಿಗಳೊಂದಿಗೆ ಹಂಚಿಕೊಳ್ಳಬಾರದು.

(Karnataka School Reopening from August 23rd CM Basavaraj Bommai tweet)

ಇದನ್ನೂ ಓದಿ:
ಸೋಮವಾರದಿಂದ ಶಾಲೆ ಶುರು; ಏನು ಗೈಡ್​ಲೈನ್ಸ್? ಯಾವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ? ಇಲ್ಲಿದೆ ಸಂಪೂರ್ಣ ವಿವರ 

ಸೋಮವಾರದಿಂದ ಶಾಲೆ ಆರಂಭ; ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಕಡ್ಡಾಯವಾಗಿ ಪಾಲಿಸಬೇಕಾದ ಅಂಶಗಳು ಇಲ್ಲಿವೆ

Published On - 10:43 pm, Sun, 22 August 21