ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಡ್ಡಿ ಇಲ್ಲ; ಆದರೆ ಶಾಲಾ ಕಾಲೇಜುಗಳು ಬಂದ್
ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸರ್ಕಾರದಿಂದ ಅನುಮತಿ ಇರಲಿದೆ ಎಂದು ಸೂಚನೆ ಹೊರಡಿಸಲಾಗಿದೆ. ಆದರೆ, ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಬಂದ್ ಆಗಿರಲಿವೆ ಎಂದು ತಿಳಿಸಲಾಗಿದೆ.
ಬೆಂಗಳೂರು: ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅಡ್ಡಿ ಇರುವುದಿಲ್ಲ. ಪರೀಕ್ಷಾರ್ಥಿಗಳು ಪ್ರವೇಶ ಪ್ರತಿ ತೋರಿಸಿ ಓಡಾಡಬಹುದು. ಪರೀಕ್ಷಾ ಕೊಠಡಿಗೆ ತೆರಳುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸರ್ಕಾರದಿಂದ ಅನುಮತಿ ಇರಲಿದೆ ಎಂದು ಸೂಚನೆ ಹೊರಡಿಸಲಾಗಿದೆ. ಆದರೆ, ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಬಂದ್ ಆಗಿರಲಿವೆ ಎಂದು ತಿಳಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ವಾರದ 5 ದಿನ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರಲಿದೆ. ವಸತಿ ಹಾಗೂ ತುಲಾಭಾರ ಉತ್ಸವಾದಿ ಸೇವೆಗಳು ರದ್ದು ಆಗಲಿದೆ. ಮುಂದಿನ ಆದೇಶದವರೆಗೂ ಸೇವೆ ರದ್ದುಪಡಿಸಿ ಶ್ರೀಕ್ಷೇತ್ರದಿಂದ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳ ಕ್ಷೇತ್ರದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಹೊಸ ನಿಯಮಾವಳಿ ಜಾರಿಗೊಳಿಸಲಾಗಿದೆ.
ಕರ್ನಾಟಕ ಕೊರೊನಾ ಪ್ರಕರಣಗಳ ವಿವರ ಕರ್ನಾಟಕದಲ್ಲಿ ಶುಕ್ರವಾರ (ಜ.7) ಒಂದೇ ದಿನ 8449 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 505 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 4.15 ಇದ್ದು, ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಈವರೆಗೆ 30,31,052 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 29,62,548 ಮಂದಿ ಚೇತರಿಸಿಕೊಂಡಿದ್ದಾರೆ. ಕೊರೊನಾದಿಂದ ಒಟ್ಟು 38,362 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 30,113 ಸಕ್ರಿಯ ಪ್ರಕರಣಗಳಿವೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 6812, ದಕ್ಷಿಣ ಕನ್ನಡ 211, ಮೈಸೂರು 219, ಮಂಡ್ಯ 129, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 74, ಬಾಗಲಕೋಟೆ, ರಾಯಚೂರು 2, ಬಳ್ಳಾರಿ 62, ಬೀದರ್ 20, ಚಾಮರಾಜನಗರ 7, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 24, ಚಿತ್ರದುರ್ಗ 14, ದಾವಣಗೆರೆ 18, ಧಾರವಾಡ 66, ಗದಗ 10, ಹಾಸನ 89, ಕಲಬುರಗಿ 43, ಕೊಡಗು 29, ಕೋಲಾರ 98, ಕೊಪ್ಪಳ 5, ರಾಮನಗರ 20, ಶಿವಮೊಗ್ಗ 43, ತುಮಕೂರು 96, ಉಡುಪಿ 148, ಉತ್ತರ ಕನ್ನಡ, ವಿಜಯಪುರ 36, ಯಾದಗಿರಿ 1.
ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ
ಇದನ್ನೂ ಓದಿ: ಇನ್ನೂ ಕೆಲ ಸಮಯ ಕೊರೊನಾ ಸೋಂಕಿನೊಂದಿಗೆ ಬದುಕುವುದು ಕಲಿಯಬೇಕಿದೆ: ದಕ್ಷಿಣ ಆಫ್ರಿಕಾದ ತಜ್ಞ ವೈದ್ಯೆ ಆಂಜೆಲಿಕ್ ಕೊಯೆಟ್ಜಿ