Schools Reopening: ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ

ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Schools Reopening: ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ
ಪ್ರಾತಿನಿಧಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 14, 2021 | 10:25 PM

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಶೇ 2ಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ಮತ್ತೆ ತೆರೆಯಲು ಕ್ರಮ ವಹಿಸಲಾಗುವುದು. ಶಾಲೆಗಳ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೊವಿಡ್ ನಿರ್ವಹಣೆ ಕುರಿತು ಮುಖ್ಯಮಂತ್ರಿಗಳು ಮಾಹಿತಿ ಪಡೆದುಕೊಂಡರು. ಮಕ್ಕಳ ಚಿಕಿತ್ಸೆಗಾಗಿ ಐಸಿಯು ಬೆಡ್​ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ ಪಾಸಿಟಿವಿಟಿ ದರ 0.75. ನಗರದಲ್ಲಿ ಶೇ 2ರಷ್ಟು ಪಾಸಿಟಿವಿಟಿ ದರ ಹಾಗೂ ಶೇ 40ರಷ್ಟು ಆಕ್ಸಿಜನೇಟೆಡ್ ಬೆಡ್​ಗೆ ಸೋಂಕಿತರಾದರು ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಯಿತು.

ಜಿಲ್ಲಾವಾರು ಪಾಸಿಟಿವಿಟಿ ಪ್ರಮಾಣ ಕಳೆದ 7 ದಿನಗಳ ಸರಾಸರಿಯಲ್ಲಿ (ಆಗಸ್ಟ್​ 7ರಿಂದ 13) ರಾಜ್ಯದ 4 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 2ಕ್ಕಿಂತ ಹೆಚ್ಚಿರುವುದು ದಾಖಲಾಗಿದೆ. ಸರ್ಕಾರದ ಸೂಚನೆಯಂತೆ ಈ ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿಗಳು ಆರಂಭವಾಗುವ ಸಾಧ್ಯತೆಯಿದೆ. ವಿವಿಧ ಜಿಲ್ಲೆಗಳ ಶೇಕಡಾವಾರು ಪಾಸಿಟಿವಿಟಿ ಮಾಹಿತಿ ಇಂತಿದೆ…

ದಕ್ಷಿಣ ಕನ್ನಡ 3.98, ಚಿಕ್ಕಮಗಳೂರು 3.24, ಕೊಡಗು 2.71, ಉಡುಪಿ 2.42, ಹಾಸನ 2.23, ಚಾಮರಾಜನಗರ 1.29, ಶಿವಮೊಗ್ಗ 1.26, ಮೈಸೂರು 1.20, ಉತ್ತರ ಕನ್ನಡ 1.16, ಬೆಂಗಳೂರು ಗ್ರಾಮಾಂತರ 1.13, ಕೋಲಾರ 0.86, ಚಿತ್ರದುರ್ಗ 0.85, ತುಮಕೂರು 0.77, ಬೆಳಗಾವಿ 0.76, ಬೆಂಗಳೂರು ನಗರ 0.66, ಮಂಡ್ಯ 0.64, ದಾವಣಗೆರೆ 0.63, ಕಲಬುರ್ಗಿ 0.33, ರಾಮನಗರ 0.32, ಧಾರವಾಡ 0.29, ಕೊಪ್ಪಳ 0.24, ರಾಯಚೂರು 0.24, ಬಾಗಲಕೋಟೆ 0.22, ಚಿಕ್ಕಬಳ್ಳಾಪುರ 0.17, ಬೀದರ್ 0.16, ಗದಗ 0.14, ಹಾವೇರಿ 0.13, ಯಾದಗಿರಿ 0.09, ವಿಜಯಪುರ 0.08.

(Karnataka Schools Reopening High School and PUC Colleges to Open in District with Less Positivity Rate)

ಇದನ್ನೂ ಓದಿ: ದೀರ್ಘಾವಧಿಯಲ್ಲಿ ಆನ್‌ಲೈನ್ ತರಗತಿಗಳು ಸುಗಮವಾಗಲ್ಲ : ಶಾಲೆ ಮತ್ತೆ ತೆರೆಯಬೇಕೆಂದು ಸುಪ್ರೀಂಕೋರ್ಟ್ ಮೊರೆ ಹೋದ ವಿದ್ಯಾರ್ಥಿ

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,669 ಜನರಿಗೆ ಕೊರೊನಾ ದೃಢ; 22 ಮಂದಿ ಸಾವು

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ