PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಸಾಂಕೇತಿಕ ಚಿತ್ರ

ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ ಪ್ರಕಟಿಸಿದೆ.

TV9kannada Web Team

| Edited By: ganapathi bhat

Nov 12, 2021 | 9:43 PM

ಬೆಂಗಳೂರು: ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ. ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ ಪ್ರಕಟಿಸಿದೆ. ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಸಭೆ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದರು. ಅಕ್ಟೋಬರ್ 3ರಿಂದ ಪಬ್‌ಗಳಲ್ಲೂ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಅವರು ಘೋಷಿಸಿದ್ದರು. ಇದೀಗ ಎಲ್​ಕೆಜಿ, ಯುಕೆಜಿ ಸಹಿತ ಎಲ್ಲಾ ಶಾಲಾ ತರಗತಿಗಳು ಕೂಡ ಆರಂಭವಾಗಿದೆ. ಕೊರೊನಾ ಸಂಬಂಧಿಸಿ ಇದ್ದ ನೈಟ್ ಕರ್ಫ್ಯೂ ಕೂಡ ಸಂಪೂರ್ಣವಾಗಿ ಹಿಂಪಡೆಯಲಾಗಿದೆ.

ಕೊರೊನಾ ಎರಡನೇ ಅಲೆ ಬಳಿಕ ಜನಜೀವನ ಸಮತೋಲನಕ್ಕೆ ಬರುತ್ತಿದೆ. ಆನ್​ಲೈನ್ ವಿಧಾನದಲ್ಲೇ ಸಾಗಿದ್ದ ಶಿಕ್ಷಣ ಮತ್ತೆ ಆಫ್​ಲೈನ್ ಮೂಲಕ ಸಾಗುತ್ತಿದೆ. ಶಾಲೆ, ಕಾಲೇಜು ತರಗತಿಗಳು ಮತ್ತೆ ತುಂಬಿಕೊಂಡಿವೆ. ಈ ನಡುವೆ ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಶುಕ್ರವಾರ ಪ್ರಕಟವಾಗಿದೆ. ಪರೀಕ್ಷೆ ದಿನಾಂಕವನ್ನು ಹೇಳಲಾಗಿದೆ.

ಇದನ್ನೂ ಓದಿ: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರ; ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ ಎಂದು ಪ್ರಶ್ನಿಸಿದ ಹೈಕೋರ್ಟ್

ಇದನ್ನೂ ಓದಿ: National Education Day 2021: ಮೌಲಾನಾ ಅಬುಲ್​ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನೆಪಿಸಿಕೊಳ್ಳಲೇಬೇಕು

Follow us on

Related Stories

Most Read Stories

Click on your DTH Provider to Add TV9 Kannada