AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Exam-2 Result: ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ, 3ನೇ ಬಾರಿಯ ಪರೀಕ್ಷೆಗೆ ದಿನಾಂಕ ಘೋಷಣೆ

ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ 2025 ಪ್ರಕಟ: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟಗೊಂಡಿದೆ. ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ-2ನೇ ಫಲಿತಾಂಶವನ್ನು ವಿದ್ಯಾರ್ಥಿಗಳು karresults.nic.inನಲ್ಲಿ ನೋಡಬಹುದು. ದ್ವಿತೀಯ ಪಿಯುಸಿ ಪರೀಕ್ಷೆ-3ರ ದಿನಾಂಕ ಕೂಡ ಘೋಷಣೆಯಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3 ಯಾವಾಗಿನಿಂದ ಆರಂಭ? ಇಲ್ಲಿದೆ ಮಾಹಿತಿ

Karnataka 2nd PUC Exam-2 Result: ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ, 3ನೇ ಬಾರಿಯ ಪರೀಕ್ಷೆಗೆ ದಿನಾಂಕ ಘೋಷಣೆ
ಸಾಂದರ್ಭಿಕ ಚಿತ್ರ
Vinay Kashappanavar
| Updated By: ವಿವೇಕ ಬಿರಾದಾರ|

Updated on:May 16, 2025 | 6:22 PM

Share

ಬೆಂಗಳೂರು, ಮೇ 16: ಪದವಿ ಪೂರ್ವ ಶಿಕ್ಷಣ ಇಲಾಖೆ (PU Board) ದ್ವಿತೀಯ ಪಿಯುಸಿ ಪರೀಕ್ಷೆ-2 ಪಲಿತಾಂಶವನ್ನು ಶುಕ್ರವಾರ (ಮೇ. 16) ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಏಪ್ರಿಲ್ 24ರಿಂದ ಮೇ 8ರವರೆಗೆ ನಡೆದಿದ್ದ ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು. 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರ್ಣಾಗಿದ್ದಾರೆ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದ 71,964 ವಿದ್ಯಾರ್ಥಿಗಳು ಪರೀಕ್ಷೆ-2 ಅನ್ನೂ ಬರೆದಿದ್ದಾರೆ. ಇವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ-3 ಯಾವಾಗ?

ಜೂನ್ 9ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ-3 ನಡೆಯಲಿದೆ. ದ್ವಿತೀಯ ಪಿಯು ಪರೀಕ್ಷೆ-3 ತೆಗೆದುಕೊಳ್ಳುವವರಿಗೂ ಕೂಡ ಶುಲ್ಕ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ
Image
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆ
Image
ಬ್ರಿಟಿಷ್​ ಅಧಿಕಾರಿಗಳ ಮಕ್ಕಳು ಓದಿದ ಕೋಲಾರದ ಐತಿಹಾಸಿಕ ಶಾಲೆಯ ಕಥೆ ವ್ಯಥೆ!
Image
ಕ್ಯಾನ್ಸರ್ ಗೆದ್ದ ಬಾಲಕಿ, ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲೂ ಟಾಪರ್
Image
CBSE ಫಲಿತಾಂಶ ಪ್ರಕಟಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಗುಡ್​​​ ನ್ಯೂಸ್​​​!

ದ್ವಿತೀಯ ಪಿಯು ಫಲಿತಾಂಶ ನೋಡುವುದು ಹೇಗೆ?

ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್​​ಸೈಟ್​​ನಲ್ಲಿಯೂ ಅಪ್​ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್​ಸೈಟ್​​ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

ಇದನ್ನೂ ಓದಿ: ಸಿಇಟಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ

ದ್ವಿತೀಯ ಪಿಯು ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

  • ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
  • ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.
  • Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
  • ಈಗ ನೀವು ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.

ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

“ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ ಉತ್ತೀರ್ಣರಾದ ಎಲ್ಲಾ 60,692 ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಫಲಿತಾಂಶದ ಸುಧಾರಣೆ ಬಯಸಿ ಮತ್ತೊಮ್ಮೆ ಪರೀಕ್ಷೆ ಎದುರಿಸಿದ್ದ 41,719 ವಿದ್ಯಾರ್ಥಿಗಳು ಕಳೆದ ಬಾರಿಗಿಂತ ಹೆಚ್ಚು ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ನಿಮ್ಮೆಲ್ಲರ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

“ಹಿಂದಿನ ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವ ಅಗತ್ಯವಿಲ್ಲ. ಯಾವುದೇ ಶುಲ್ಕವಿಲ್ಲದೆ ಪರೀಕ್ಷೆ -3 ಅನ್ನು ಬರೆದು ಉತ್ತೀರ್ಣರಾಗುವ ಅವಕಾಶವನ್ನು ಸರ್ಕಾರ ನಿಮಗೆ ಒದಗಿಸಿಕೊಟ್ಟಿದೆ. ಇದರ ಸದುಪಯೋಗ ಪಡೆದು ಭವಿಷ್ಯ ರೂಪಿಸಿಕೊಳ್ಳಿ” ಎಂದು ಕಿವಿಮಾತು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Fri, 16 May 25

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ