ಬೆಂಗಳೂರು, ಮೇ 16: ಪದವಿ ಪೂರ್ವ ಶಿಕ್ಷಣ ಇಲಾಖೆ (PU Board) ದ್ವಿತೀಯ ಪಿಯುಸಿ ಪರೀಕ್ಷೆ-2 ಪಲಿತಾಂಶವನ್ನು ಶುಕ್ರವಾರ (ಮೇ. 16) ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಏಪ್ರಿಲ್ 24ರಿಂದ ಮೇ 8ರವರೆಗೆ ನಡೆದಿದ್ದ ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು. 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರ್ಣಾಗಿದ್ದಾರೆ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದ 71,964 ವಿದ್ಯಾರ್ಥಿಗಳು ಪರೀಕ್ಷೆ-2 ಅನ್ನೂ ಬರೆದಿದ್ದಾರೆ. ಇವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.
ಜೂನ್ 9ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ-3 ನಡೆಯಲಿದೆ. ದ್ವಿತೀಯ ಪಿಯು ಪರೀಕ್ಷೆ-3 ತೆಗೆದುಕೊಳ್ಳುವವರಿಗೂ ಕೂಡ ಶುಲ್ಕ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.
ಇದನ್ನೂ ಓದಿ: ಸಿಇಟಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ
ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ ಉತ್ತೀರ್ಣರಾದ ಎಲ್ಲಾ 60,692 ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಫಲಿತಾಂಶದ ಸುಧಾರಣೆ ಬಯಸಿ ಮತ್ತೊಮ್ಮೆ ಪರೀಕ್ಷೆ ಎದುರಿಸಿದ್ದ 41,719 ವಿದ್ಯಾರ್ಥಿಗಳು ಕಳೆದ ಬಾರಿಗಿಂತ ಹೆಚ್ಚು ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ನಿಮ್ಮೆಲ್ಲರ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ.…
— Siddaramaiah (@siddaramaiah) May 16, 2025
“ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ ಉತ್ತೀರ್ಣರಾದ ಎಲ್ಲಾ 60,692 ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಫಲಿತಾಂಶದ ಸುಧಾರಣೆ ಬಯಸಿ ಮತ್ತೊಮ್ಮೆ ಪರೀಕ್ಷೆ ಎದುರಿಸಿದ್ದ 41,719 ವಿದ್ಯಾರ್ಥಿಗಳು ಕಳೆದ ಬಾರಿಗಿಂತ ಹೆಚ್ಚು ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ನಿಮ್ಮೆಲ್ಲರ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
“ಹಿಂದಿನ ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವ ಅಗತ್ಯವಿಲ್ಲ. ಯಾವುದೇ ಶುಲ್ಕವಿಲ್ಲದೆ ಪರೀಕ್ಷೆ -3 ಅನ್ನು ಬರೆದು ಉತ್ತೀರ್ಣರಾಗುವ ಅವಕಾಶವನ್ನು ಸರ್ಕಾರ ನಿಮಗೆ ಒದಗಿಸಿಕೊಟ್ಟಿದೆ. ಇದರ ಸದುಪಯೋಗ ಪಡೆದು ಭವಿಷ್ಯ ರೂಪಿಸಿಕೊಳ್ಳಿ” ಎಂದು ಕಿವಿಮಾತು ಹೇಳಿದ್ದಾರೆ.
Published On - 5:56 pm, Fri, 16 May 25