Second PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ; ಸಿದ್ಧತೆ ಬಗ್ಗೆ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು

ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿದ್ಧತೆ ಬಗ್ಗೆ ವಿವರ ನೀಡಿದರು.

Second PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ; ಸಿದ್ಧತೆ ಬಗ್ಗೆ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು
ಬಿಸಿ ನಾಗೇಶ್ (ಸಂಗ್ರಹ ಚಿತ್ರ)
Follow us
Ganapathi Sharma
| Updated By: Digi Tech Desk

Updated on:Mar 10, 2023 | 1:10 PM

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ (Second PUC Exam) ಗುರುವಾರದಿಂದ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿದ್ಧತೆ ಬಗ್ಗೆ ವಿವರ ನೀಡಿದರು. 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು (MCQ) ಇರಲಿವೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದ್ದೇವೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ 7,26,195 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ 200 ಮೀಟರ್​​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 1109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲ್ಲೂಕು ಜಾಗೃತ ದಳ, 2,373 ವಿಷೇಷ ಜಾಗೃತ ದಳ ನಿಯೊಜನೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಎಲ್ಲ ಪರೀಕ್ಷಾ ಕೊಠಡಿಗಳಲ್ಲಿಯೂ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಪರೀಕ್ಷಾ ಕೊಠಡಿ ಒಳಗೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಕೊಂಡೊಯ್ಯಲು ಅನುಮತಿಸಲಾಗುವುದಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಆರಂಭದ ಸಮಯಕ್ಕೆ 15 ನಿಮಿಷಗಳ ಮೊದಲು ಕೊಠಡಿಯೊಳಗೆ ತೆರಳಬಹುದು ಎಂದು ಸಚಿವರು ತಿಳಿಸಿದ್ದಾರೆ.

ಮೇ ಮೊದಲ ವಾರ ಫಲಿತಾಂಶ

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದೂ ಸಚಿವರು ತಿಳಿಸಿದ್ದಾರೆ. ಪರೀಕ್ಷೆ ಸುಗಮವಾಗಿ ನಡೆಯಲು, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ಫಲಿತಾಂಶ ಘೋಷಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 2nd PUC Exam: ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ, ಪರೀಕ್ಷೆ ಸರಳೀಕರಣ

ಹಿಜಾಬ್​ಗಿಲ್ಲ ಅವಕಾಶ

ನಾವು ಯಾರದೇ ವಿನಂತಿಯ ಆಧಾರದ ಮೇಲೆ ಸರ್ಕಾರವನ್ನು ನಡೆಸುತ್ತಿಲ್ಲ. ಈ ನೆಲದ ಕಾನೂನಿನ ಆಧಾರದಲ್ಲಿ ಸರ್ಕಾರವನ್ನು ನಡೆಸುತ್ತಿದ್ದೇವೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ಅನುಮತಿಸಲಾಗುವುದಿಲ್ಲ ಎಂದು ನಾಗೇಶ್ ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆಯು ಈ ಬಾರಿ ಎಲ್ಲ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲೂ 1 ಅಂಕದ 20 ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಿದೆ. ಈ ಹಿಂದೆ 5 ಅಥವಾ 6 ಬಹು ಆಯ್ಕೆಯ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಮೌಲ್ಯಮಾಪನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಗ್ರೇಸ್ ಮಾರ್ಕ್ಸ್​​ಗೆ ಸಂಬಂಧಿಸಿಯೂ ತಿದ್ದುಪಡಿ ಮಾಡಲಾಗಿದೆ.

ಪರೀಕ್ಷೆಗೆ ತೆರಳುವವರಿಗೆ ಕೆಎಸ್​ಆರ್​ಟಿಸಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್​​ಟಿಸಿ ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ಈಗಾಗಲೇ ತಿಳಿಸಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿರುವ ನಿಗಮ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Wed, 8 March 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್