Karnataka PUC-2 Result 2024: ಇಂದು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ: ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ?

Karnataka PUC-2 Result 2024: ಈಗಾಗಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ ಅನುತ್ತೀರ್ಣರಾದವರಿಗೆ ನಡೆಸಿದ ಪರೀಕ್ಷೆ-2 ಫಲಿತಾಂಶ ಇಂದು (ಮೇ 21) ಪ್ರಕಟವಾಗಲಿದೆ. ಇದರೊಂದಿಗೆ ರಿಸಲ್ಟ್ ಯಾವಾಗ ಪ್ರಕಟವಾಗಲಿದೆ ಎಂದು ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಬಿದ್ದಿದೆ. ಹಾಗಾದ್ರೆ, ರಿಸಲ್ಟ್​ ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ? ಎನ್ನುವ ಮಾಹಿತಿ ಇಲ್ಲಿದೆ.

Karnataka PUC-2 Result 2024: ಇಂದು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ: ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ?
ದ್ವಿತೀಯ ಪಿಯುಸಿ ಪರೀಕ್ಷೆ- 2
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:May 21, 2024 | 9:18 AM

ಬೆಂಗಳೂರು, (ಮೇ 21): ಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ(Karnataka Second PUC Exam 2nd Result 2024) ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಏಪ್ರಿಲ್ 29 ರಿಂದ ಮೇ 16 ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ಇದೀಗ ಅದರ ಫಲಿತಾಂಶ ಇಂದು (ಮೇ 21)ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರ ಬೀಳಲಿದೆ. 2024ರ ಏಪ್ರಿಲ್​ 19ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ 2 ಅನ್ನು ನಡೆಸಲಾಗಿತ್ತು. ವಿಶೇಷ ಎಂದರೆ ಈ ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.

ಇದನ್ನೂ ಓದಿ: CET Result 2024: ಕರ್ನಾಟಕ ಸಿಇಟಿ ಫಲಿತಾಂಶ ಯಾವಾಗ? ಸ್ಪಷ್ಟನೆ ನೀಡಿದ ಕೆಇಎ

ಇನ್ನು, ದ್ವಿತೀಯ ಪಿಯುಸಿ 2ರ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದೆ. ದ್ವಿತೀಯ ಪಿಯುಸಿ 2ರ ಫಲಿತಾಂಶವನ್ನು ಇಂದು ಮಧ್ಯಾಹ್ನ 03 ಗಂಟೆಗೆ https://karresults.nic.in ವೆಬ್​​ಸೈಟ್​ನಲ್ಲಿ ವೀಕ್ಷಣೆ ಮಾಡಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.

ಫಲಿತಾಂಶ ನೋಡುವುದು ಹೇಗೆ?

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
  • ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
  • ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:09 pm, Mon, 20 May 24

ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್