Karnataka 2nd PUC Result: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಫಿಕ್ಸ್? ರಿಸಲ್ಟ್ ನೋಡೋದು ಹೇಗೆಂದು ಇಲ್ಲಿ ನೋಡಿ
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025: ಮಾರ್ಚ್ 1 ರಿಂದ 20 ರ ವರೆಗೆ ನಡೆದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಫಲಿತಾಂಶ ಪ್ರಕಟ ಯಾವಾಗ? ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡುವುದು ಹೇಗೆ? ಅಂಕ ಪಟ್ಟಿ ಡೌನ್ಲೋಡ್ ಮಾಡುವುದು ಹೇಗೆಂಬ ವಿವರ ಇಲ್ಲಿದೆ.

ಬೆಂಗಳೂರು, ಏಪ್ರಿಲ್ 1: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ (Second PU Result 2025) ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (KSEAB) ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಮಾಪನ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ಕಳೆದ ವರ್ಷ ಸೆಕೆಂಡ್ ಪಿಯು ಫಲಿತಾಂಶವನ್ನು ಏಪ್ರಿಲ್ 10 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ದ್ವಿತೀಯ ಪಿಯು ಫಲಿತಾಂಶ ನೋಡುವುದು ಹೇಗೆ?
ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.
ದ್ವಿತೀಯ ಪಿಯು ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ
- ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
- ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
- ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.
- Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
- ಈಗ ನೀವು ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಇರುತ್ತದೆ.
ಇದನ್ನೂ ಓದಿ: ಮಂಗಳೂರು: 100 ಪರ್ಸೆಂಟ್ ಫಲಿತಾಂಶಕ್ಕಾಗಿ ಮಕ್ಕಳನ್ನು SSLC ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!
ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:48 am, Tue, 1 April 25