ದ್ವಿತೀಯ ಪಿಯುಸಿ ಫಲಿತಾಂಶ 2021: ಫಲಿತಾಂಶ ನೋಡುವುದು ಹೇಗೆ? ಅಂಕಗಳ ಬಗ್ಗೆ ತಕರಾರಿದ್ದರೆ ಏನು ಮಾಡಬೇಕು?

Karnataka Second PUC Results 2021: ಒಮ್ಮೆ ಫಲಿತಾಂಶವನ್ನು ತಿರಸ್ಕರಿಸಿದ ನಂತರ ಮತ್ತೆ ಅದನ್ನು ಪಡೆಯುವುದು ಅಸಾಧ್ಯವಾಗಿದ್ದು, ಹೊಸದಾಗಿ ಪರೀಕ್ಷೆ ಬರೆದೇ ಉತ್ತೀರ್ಣರಾಗಬೇಕಿದೆ. ಹೀಗಾಗಿ ಇಂದಿನ ಫಲಿತಾಂಶವನ್ನು ಚಾಲೆಂಜ್ ಮಾಡುವ ವಿದ್ಯಾರ್ಥಿಗಳು ಆಗಸ್ಟ್ ತಿಂಗಳ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಲು ಸಿದ್ಧರಾಗಬೇಕಿದೆ.

ದ್ವಿತೀಯ ಪಿಯುಸಿ ಫಲಿತಾಂಶ 2021: ಫಲಿತಾಂಶ ನೋಡುವುದು ಹೇಗೆ? ಅಂಕಗಳ ಬಗ್ಗೆ ತಕರಾರಿದ್ದರೆ ಏನು ಮಾಡಬೇಕು?
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jul 20, 2021 | 9:30 AM

ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Second PUC Results 2021) ಇಂದು ಸಂಜೆ 4.30ಕ್ಕೆ ಪ್ರಕಟವಾಗಲಿದೆ. ಪರೀಕ್ಷೆ ಬರೆಯದೇ 6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದು, ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಸಿಬಿಎಸ್​ಸಿ ಮಾದರಿಯನ್ನು (CBSE Model) ಅನುಸರಿಸಿ ಅವರಿಗೆ ಅಂಕ ನೀಡಲಾಗುತ್ತಿದೆ. ಈ ಪೈಕಿ 5,90,153 ಮಂದಿ ಹೊಸ ವಿದ್ಯಾರ್ಥಿಗಳಿದ್ದರೆ 76,344 ಮಂದಿ ಮರುಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳಿದ್ದರೆ. ಫಲಿತಾಂಶ ಪಡೆಯಲು Know My Register Number ನಂಬರ್ ಹಂಚಿಕೆ ಮಾಡಲಿದ್ದು, ಎನ್​ಐಸಿ (NIC) ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಒಂದುವೇಳೆ ಇಂದು ಪ್ರಕಟವಾಗುವ ಫಲಿತಾಂಶದ ಬಗ್ಗೆ ಯಾವುದೇ ವಿದ್ಯಾರ್ಥಿಗೆ ತಕರಾರಿದ್ದರೆ ಅವರಿಗೆ ಮರು ಪರೀಕ್ಷೆ ಬರೆಯಲು ಆಗಸ್ಟ್ ತಿಂಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್​ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಸುಮಾರು 17 ಸಾವಿರ ವಿದ್ಯಾರ್ಥಿಗಳು ಮುಂದಿನ ತಿಂಗಳು ಪರೀಕ್ಷೆ ಬರೆಯುವವರಿದ್ದಾರೆ. ಇಂದಿನ ಫಲಿತಾಂಶವನ್ನು ತಿರಸ್ಕರಿಸುವವರಿಗೂ ಅದೇ ಸಮಯದಲ್ಲಿ ಹೊಸದಾಗಿ ಪರೀಕ್ಷೆ ನೀಡಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಆದರೆ, ಒಮ್ಮೆ ಫಲಿತಾಂಶವನ್ನು ತಿರಸ್ಕರಿಸಿದ ನಂತರ ಮತ್ತೆ ಅದನ್ನು ಪಡೆಯುವುದು ಅಸಾಧ್ಯವಾಗಿದ್ದು, ಹೊಸದಾಗಿ ಪರೀಕ್ಷೆ ಬರೆದೇ ಉತ್ತೀರ್ಣರಾಗಬೇಕಿದೆ. ಹೀಗಾಗಿ ಇಂದಿನ ಫಲಿತಾಂಶವನ್ನು ಚಾಲೆಂಜ್ ಮಾಡುವ ವಿದ್ಯಾರ್ಥಿಗಳು ಆಗಸ್ಟ್ ತಿಂಗಳ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಲು ಸಿದ್ಧರಾಗಬೇಕಿದೆ. ಸಿಬಿಎಸ್‌ಇ ಮಾದರಿಯಲ್ಲಿ ಎಸ್ಎಸ್‌ಎಲ್‌ಸಿ, ಪಿಯು ಅಂಕ ಪರಿಗಣಿಸಿ ಫಲಿತಾಂಶ ನೀಡಲು ಸಿದ್ಧತೆ ಕೈಗೊಳ್ಳಲಾಗಿದ್ದು, ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಫಲಿತಾಂಶ ಹೊರಬೀಳಲಿದೆ.

ಫಲಿತಾಂಶ ನೋಡುವುದು ಹೇಗೆ ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು ಎದುರಾಗಿದ್ದು, ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್​ ಸ್ಪಷ್ಟನೆ ನೀಡಿದೆ. ಪ್ರತಿ ವರ್ಷ ಪರೀಕ್ಷೆ‌ಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ‌ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್‌ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

Know my number ಆಯ್ಕೆಯನ್ನು ವೆಬ್​ಸೈಟ್ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ ಎಸ್​ಎಂಸ್​ ಮೂಲಕ ತಿಳಿಸುವುದರೊಂದಿಗೆ ಆಯಾ ಕಾಲೇಜಿಗೆ ಈ ಕುರಿತು ಮಾಹಿತಿ ನೀಡಲಾಗುತ್ತದೆ. ಫಲಿತಾಂಶ ಮುನ್ನ ತಮ್ಮ ರಿಜಿಸ್ಟರ್‌ ನಂಬರನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಅನ್ನು ಚೆಕ್‌ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ವೆಬ್​ಸೈಟ್ ಮೂಲಕ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಜುಲೈ 20, ಸಂಜೆ 4.30ಕ್ಕೆ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್ 

Second PUC Results 2021: ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ವೆಬ್​ಸೈಟ್​ನಲ್ಲಿ ಲಭ್ಯ

Published On - 7:13 am, Tue, 20 July 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್