Karnataka SSLC Result 2023: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಒಂದೇ ಕ್ಲಿಕ್​ನಲ್ಲಿ ರಿಸಲ್ಟ್ ನೋಡಿ

Karnataka 10th Result at karresults.nic.in: ಇಂದು 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಹಾಗಾದ್ರೆ, ಆನ್​ಲೈನ್​ಲಿ ಫಲಿತಾಂಶ ಚೆಕ್ ಮಾಡುವುದು ಹೇಗೆ? ಇಲ್ಲಿದೆ ವಿವರ.

Karnataka SSLC Result 2023: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಒಂದೇ ಕ್ಲಿಕ್​ನಲ್ಲಿ ರಿಸಲ್ಟ್ ನೋಡಿ
Follow us
ರಮೇಶ್ ಬಿ. ಜವಳಗೇರಾ
|

Updated on:May 08, 2023 | 9:42 AM

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exm Result) ಇಂದು (ಮೇ 08) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದೆ. ಬಳಿಕ ಬೆಳಗ್ಗೆ 11 ಗಂಟೆ ನಂತರ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ (http://karresults.nic.in) ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.

Karnataka SSLC Result 2023: ಎಸ್​ಎಸ್​ಎಲ್​ಸಿ ಅಲ್ಲಿ ಕಡಿಮೆ ಅಂಕ ಅಥವಾ ಫೇಲ್ ಆಗುತ್ತೀರಿ ಎಂದನಿಸಿದರೆ ಇದನ್ನು ಒಮ್ಮೆ ಓದಿ

2022- 2023ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮತದಾನಕ್ಕೆ ಎರಡು ದಿನ ಮೊದಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) ಅಧಿಕಾರಿಗಳು karresults.nic.in ಮತ್ತು kseab.karnataka.gov.in.ನಲ್ಲಿ SSLC ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಸಂಖ್ಯೆ, ಹುಟ್ಟಿದ ದಿನಾಂಕ ಹಾಗೂ ಇತರ ವಿವರಗಳನ್ನು ನೀಡ ಬೇಕಾಗುತ್ತದೆ.

ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?

  • ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ ತೆರೆಯಬೇಕು.
  •  ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು
  •  ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು
  • ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

LIVE Result – ಕರ್ನಾಟಕ ಎಸ್​​ಎಸ್​ಎಲ್​ಸಿ ಫಲಿತಾಂಶ ಲೈವ್​ ಅಪ್ಡೇಟ್ಸ್​

Published On - 6:40 am, Mon, 8 May 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್