ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ 2022-23ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exm Result) ಇಂದು (ಮೇ 08) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದೆ. ಬಳಿಕ ಬೆಳಗ್ಗೆ 11 ಗಂಟೆ ನಂತರ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ (http://karresults.nic.in) ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.
2022- 2023ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮತದಾನಕ್ಕೆ ಎರಡು ದಿನ ಮೊದಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) ಅಧಿಕಾರಿಗಳು karresults.nic.in ಮತ್ತು kseab.karnataka.gov.in.ನಲ್ಲಿ SSLC ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಸಂಖ್ಯೆ, ಹುಟ್ಟಿದ ದಿನಾಂಕ ಹಾಗೂ ಇತರ ವಿವರಗಳನ್ನು ನೀಡ ಬೇಕಾಗುತ್ತದೆ.
Published On - 6:40 am, Mon, 8 May 23