Karnataka SSLC Class 10 Result 2024: ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

Karnataka 10th Result at karresults.nic.in: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಯ ಕಾರಣ ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ತುಸು ತಡವಾಗಿ ಪ್ರಕಟವಾಗುತ್ತಿದೆ. ಎಷ್ಟು ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ? ವೆಬ್​ಸೈಟ್​​ನಲ್ಲಿ ನೋಡುವುದು ಹೇಗೆ ಇತ್ಯಾದಿ ಮಾಹಿತಿ ಇಲ್ಲಿದೆ.

Karnataka SSLC Class 10 Result 2024: ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ
ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ
Follow us
Ganapathi Sharma
|

Updated on: May 09, 2024 | 6:55 AM

ಬೆಂಗಳೂರು, ಮೇ 6: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಬುಧವಾರ ಸಂಕೆ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಮಾರ್ಚ್ ಹಾಗೂ ಏಪ್ರಿಲ್​ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂನಲ್ಲಿ ಸುದ್ದಿಗೋಷ್ಠಿ ಕರೆದಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ 10.30ರ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಎಸ್​ಎಸ್​ಎಲ್​​ಸಿ ಫಲಿತಾಂಶ: ಆನ್​ಲೈನ್​ನಲ್ಲಿ ನೋಡೋದು ಹೇಗೆ?

ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?

  • ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹೊಸ ಲಾಗಿನ್ ಪುಟವು ತೆರೆಯುತ್ತದೆ
  • ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

ಕಳೆದ ವರ್ಷ, ಕರ್ನಾಟಕ ಬೋರ್ಡ್ ಎಸ್​ಎಸ್​ಎಲ್​ಸಿ ಫಲಿಶಾಂಶವನ್ನು ಮೇ 08 ರಂದು ಘೋಷಿಸಿತ್ತು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ 83.89 ರಷ್ಟು ದಾಖಲಾಗಿತ್ತು.

ಇದನ್ನೂ ಓದಿ: SSLC ಫಲಿತಾಂಶ ಪ್ರಕಟ, ರಿಸಲ್ಟ್​​​ ನೋಡಲು ಈ ವೆಬ್​ ಸೈಟ್​​​ಗಳಿಗೆ ಭೇಟಿ ನೀಡಿ

ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ