ಬದಲಾದ ಎಸ್​​ಎಸ್​ಎಲ್​ಸಿ ಟಾಪರ್: ಬೆಂಗಳೂರಿನ ವಿದ್ಯಾರ್ಥಿನಿ ಭಾವನಾ ರಾಜ್ಯಕ್ಕೆ ಪ್ರಥಮ ​

SSLC Revaluation Result: 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಮರು ಮೌಲ್ಯಮಾಪನ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬೆಂಗಳೂರಿನ ಟಿ.ದಾಸರಹಳ್ಳಿ ಬಿಎನ್​ಆರ್​​ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಭಾವನಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಹಿಂದೆ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.

ಬದಲಾದ ಎಸ್​​ಎಸ್​ಎಲ್​ಸಿ ಟಾಪರ್: ಬೆಂಗಳೂರಿನ ವಿದ್ಯಾರ್ಥಿನಿ ಭಾವನಾ ರಾಜ್ಯಕ್ಕೆ ಪ್ರಥಮ ​
ಬದಲಾದ ಎಸ್​​ಎಸ್​ಎಲ್​ಸಿ ಟಾಪರ್: ಬೆಂಗಳೂರಿನ ವಿದ್ಯಾರ್ಥಿನಿ ಭಾವನಾ ರಾಜ್ಯಕ್ಕೆ ಪ್ರಥಮ ​
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 05, 2024 | 4:56 PM

ಬೆಂಗಳೂರು, ಜೂನ್​ 5: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮರು ಮೌಲ್ಯಮಾಪನ ಫಲಿತಾಂಶ (Revaluation Result) ಪ್ರಕಟಸಿದ್ದು, ಪರೀಕ್ಷೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿ ಬಿಎನ್​ಆರ್​​ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಭಾವನಾ ಮೊದಲನೇ ರ‍್ಯಾಂಕ್​ ಪಡೆದುಕೊಂಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಹಿಂದೆ ಪ್ರಕಟಿಸಿದ್ದ ಫಲಿತಾಂಶದಲ್ಲಿ ಭಾವನಾ 620 ಅಂಕ ಪಡೆದಿದ್ದರು. ಆದರೆ ಮರುಮೌಲ್ಯ ಮಾಪನದ ಬಳಿಕ 625-625 ಅಂಕ‌ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: SSLC ಟಾಪರ್ಸ್​ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ

ಈ ಹಿಂದೆ ಪರೀಕ್ಷೆಯಲ್ಲಿ ಬಾಗಲಕೋಟೆತ ಅಂಕಿತಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅಭಿನಂದನೆ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ ವಿದ್ಯಾರ್ಥಿನಿ ಫಸ್ಟ್ ರ‍್ಯಾಂಕ್‌ ಪಟ್ಟ ಅಲಂಕರಿಸಿದ್ದಾರೆ.

ಮೈಸೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಸ್ಥಾನ 

ಇನ್ನು ಮರು ಮೌಲ್ಯಮಾಪನದಲ್ಲಿ ಮೈಸೂರಿನ ವಿಜಯ ವಿಠ್ಠಲ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುದೀಕ್ಷ ಎಂ.ಡಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಮೌಲ್ಯಮಾಪಕರ ಎಡವಟ್ಟಿನಿಂದ ಮೊದಲ ಫಲಿತಾಂಶದಲ್ಲಿ 620 ಅಂಕ ಪಡೆಕೊಂಡಿದ್ದರು. ಬಳಿಕ ಮರು ಮೌಲ್ಯಮಾಪನದಲ್ಲಿ 620 ರಿಂದ 624 ಅಂಕ ಪಡೆದುಕೊಂಡಿದ್ದಾರೆ.

ಸುದೀಕ್ಷ ಮೈಸೂರಿನ ದಿನೇಶ್ ಎಂಬುವವರ ಪುತ್ರಿ ಆಗಿದ್ದು, ಕನ್ನಡ ಸೇರಿ 5 ವಿಷಯದಲ್ಲಿ ಶೇ 100ರಷ್ಟು ಅಂಕ ಗಳಿಸಿದ್ದಾರೆ. ಸಂಸ್ಕೃತ-125, ಇಂಗ್ಲಿಷ್-100, ಕನ್ನಡ-100, ವಿಜ್ಞಾನ-100, ಸಮಾಜ-100, ಗಣಿತದಲ್ಲಿ 95 ಅಂಕ ಬಂದಿತ್ತು.

ಇದನ್ನೂ ಓದಿ: ಎಸ್​ಎಸ್​ಎಲ್​ಸಿಯಲ್ಲಿ ಬಾಗಲಕೋಟೆಯ ರೈತನ ಮಗಳು ರಾಜ್ಯಕ್ಕೆ ಪ್ರಥಮ: ರ‍್ಯಾಂಕ್ ಹಿಂದಿನ ಗುಟ್ಟು ಬಿಚ್ಚಿಟ್ಟ ಅಂಕಿತಾ

ನಂತರ ಮರುಮೌಲ್ಯ ಮಾಪನಕ್ಕೆ‌ ಮನವಿ ಸಲ್ಲಿಸಲಾಗಿತ್ತು. ಇಂದು ಮರು ಮೌಲ್ಯ ಮಾಪನದ ಫಲಿತಾಂಶದಲ್ಲಿ ಗಣಿತದಲ್ಲಿ 99 ಅಂಕ ಪಡೆದುಕೊಂಡಿದ್ದಾರೆ.  ಆ ಮೂಲಕ ಒಟ್ಟು 625ಕ್ಕೆ 624 ಅಂಕ ಗಳಿಸುವ ಮೂಲಕ ಮೈಸೂರು ಜಿಲ್ಲೆಗೆ ಟಾಪರ್ ಹಾಗೂ ರಾಜ್ಯಕ್ಕೆ ಎರಡನೇ ಸ್ಥಾನ‌ ಪಡೆದುಕೊಂಡಿದ್ದಾರೆ.

ಮತ್ತಷ್ಟು ಶಿಕ್ಷಣದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:45 pm, Wed, 5 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್