ಬೆಂಗಳೂರು, ಮೇ 01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಈಗಾಗಲೇ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ (ಮೇ.02) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡುವುದು ಹೇಗೆ? ವೈಬ್ಸೈಟ್ ಯಾವುದು? ಕ್ರಮ ಹೇಗೆ? ಎಂಬೆಲ್ಲ ಮಾಹಿತಿ ಇಲ್ಲಿದೆ. ಕಳೆದ ವರ್ಷ, ಕೆಎಸ್ಇಎಬಿ ಮೇ 9 ರಂದು ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶಗಳನ್ನು ಪ್ರಕಟಿಸಿತ್ತು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ.
ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಇದನ್ನೂ ಓದಿ: ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್
ಈ ವರ್ಷ ಇನ್ನೂ ಎರಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (ಪರೀಕ್ಷೆ-2 ಮತ್ತು ಪರೀಕ್ಷೆ-3) ನಡೆಯಲಿವೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳಿಗೆ ಇನ್ನೂ ಎರಡು ಅವಕಾಶಗಳಿವೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:39 pm, Thu, 1 May 25