SSLC Result 2025: ಮೇ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ವಿವರ

Karnataka SSLC Exam-1 Results 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ SSLC ಪರೀಕ್ಷೆ-1 ರ ಫಲಿತಾಂಶ ಮೇ ತಿಂಗಳ ಮೊದಲ ವಾರದಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. SMS ಮೂಲಕವೂ ಫಲಿತಾಂಶ ಪಡೆಯಬಹುದು. ಫಲಿತಾಂಶವನ್ನು ನೋಡುವುದು ಹೇಗೆ? ಇಲ್ಲಿದೆ ವಿವರ

SSLC Result 2025: ಮೇ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Apr 16, 2025 | 4:56 PM

ಬೆಂಗಳೂರು, ಏಪ್ರಿಲ್​ 16: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್​​ಎಲ್​ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ. ಈಗಾಗಲೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಿದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ- 1 ನಡೆದಿದ್ದು 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಪರೀಕ್ಷೆ-1ರ ಫಲಿತಾಂಶವನ್ನು ಆನ್​ಲೈನ್​ನಲ್ಲಿ ನೋಡುವುದು ಹೇಗೆ? ವೈಬ್​ಸೈಟ್​ ಯಾವುದು? ಕ್ರಮ ಹೇಗೆ? ಎಂಬೆಲ್ಲ ಮಾಹಿತಿ ಇಲ್ಲಿದೆ. ಕಳೆದ ವರ್ಷ, ಕೆಎಸ್ಇಎಬಿ ಮೇ 9 ರಂದು ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶಗಳನ್ನು ಪ್ರಕಟಿಸಿತ್ತು.

ಫಲಿತಾಂಶವನ್ನು ಆನ್​ಲೈನ್​ನಲ್ಲಿ ನೋಡುವುದು ಹೇಗೆ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಇದನ್ನೂ ಓದಿ
KEA ಎಷ್ಟೇ ರೂಲ್ಸ್ ಮಾಡಿದ್ರೂ ನೋ ಯೂಸ್​! ವಿದ್ಯಾರ್ಥಿಗಳಿಂದ ರೂಲ್ಸ್ ಬ್ರೇಕ್
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಕೆಇಎ ಹೊಸ ನಿಯಮ
  1. karresults.nic.in ನಲ್ಲಿ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  2. 2025ರ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಲಿಂಕ್​ ಮೇಲೆ ಕ್ಲಿಕ್​ ಮಾಡಿ
  3. ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್​ ಪೇಜ್​ ತೆರೆದುಕೊಳ್ಳುತ್ತದೆ.
  4. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  5. ಬಳಿಕ, SSLC. Karnataka.gov.in ನಲ್ಲಿ ಆನ್​ಲೈನ್​ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ

SMS ಮೂಲಕ ಪರಿಶೀಲಿಸುವುದು ಹೇಗೆ?

  1. KAR 10 ಅಂತ ಬರೆದು ಸ್ಪೇಸ್​ ಬಿಟ್ಟು ನೋಂದಣಿ ಸಂಖ್ಯೆ ಟೈಪ್​ ಮಾಡಿ 56263ಗೆ ಸಂದೇಶ ಕಳುಹಿಸಿ.
  2. ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್​ ಸಂಖ್ಯೆಗೆ ಕಳುಹಿಸಲಾಗುತ್ತದೆ.

ಇದನ್ನೂ ಓದಿ: ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಇನ್ನೂ ಎರಡು ಅವಕಾಶಗಳಿವೆ

ಈ ವರ್ಷ ಇನ್ನೂ ಎರಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (ಪರೀಕ್ಷೆ-2 ಮತ್ತು ಪರೀಕ್ಷೆ-3) ನಡೆಯಲಿವೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳಿಗೆ ಇನ್ನೂ ಎರಡು ಅವಕಾಶಗಳಿವೆ. ಈ ಪರೀಕ್ಷೆಗಳು ಜೂನ್​ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 16 April 25

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us