ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ (SSLC Annual Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು(ಅ.29) ಪ್ರಕಟಿಸಿದೆ. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಏಪ್ರಿಲ್ 1-ಪ್ರಥಮ ಭಾಷೆ ವಿಷಯ, ಏಪ್ರಿಲ್ 4-ಗಣಿತ, ಏಪ್ರಿಲ್-6 ದ್ವಿತೀಯ ಭಾಷೆ ವಿಷಯ, ಏಪ್ರಿಲ್ 10-ವಿಜ್ಞಾನ. ಏ.12-ತೃತೀಯ ಭಾಷೆ ವಿಷಯ, ಏ.15- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
2nd PUC Exam 2023 Timetable: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಇದಕ್ಕೆ ಯಾರದ್ದಾದರೂ ಆಕ್ಷೇಪಣೆ ಇದ್ದರೇ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿದೆ.
Published On - 7:19 pm, Sat, 29 October 22