AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ

SSLC and Second PUC Exam Tentative Timetable; ಎಸ್​​​ಎಸ್​​ಎಲ್​​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 9 ರವರೆಗೆ ಕಾಲಾವಕಾಶ ನೀಡಲಾಗಿದೆ. ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯ ವಿವರ ಇಲ್ಲಿದೆ.

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ
ಎಸ್​ಎಸ್​ಎಲ್​ಸಿ ಪರೀಕ್ಷೆ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on:Sep 20, 2025 | 8:15 PM

Share

ಬೆಂಗಳೂರು, ಸೆಪ್ಟೆಂಬರ್ 20: ಎಸ್​ಎಸ್​ಎಲ್​ಸಿ (SSLC Exam) ಹಾಗೂ ದ್ವಿತೀಯ ಪಿಯುಸಿ (Second PUC Exam) 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 20.09.2025 ರಿಂದ 09.10.2025ರವರೆಗೆ ಕಾಲಾವಕಾಶ ನೀಡಲಾಗಿರುತ್ತದೆ. ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.com ಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

2026ರ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

ದ್ವಿತೀಯ ಪಿಯುಸಿ ಪರೀಕ್ಷೆ – 1 ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೊದಲ ಪರೀಕ್ಷೆ 2026ರ ಫೆಬ್ರವರಿ 28 ರಂದು ನಡೆಯಲಿದೆ. ಮಾರ್ಚ್ 17 ರಂದು ಕೊನೆಯ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ – 2 ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2026ರ ಏಪ್ರಿಲ್ 25 ರಂದು ಪರೀಕ್ಷೆ ಶುರುವಾಗಿ, ಮೇ 9 ರಂದು ಕೊನೆಗೊಳ್ಳಲಿದೆ.

2026ರ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

ಎಸ್​ಎಸ್​ಎಲ್​ಸಿ ಪರೀಕ್ಷೆ – 1 ರ ತಾತ್ಕಾಲಿಕ ವೇಳಾಪಟ್ಟಿಯಂತೆ ಪರೀಕ್ಷೆ 2026ರ ಮಾರ್ಚ್ 18 ರಂದು ಆರಂಭವಾಗಿ ಏಪ್ರಿಲ್ 1 ರಂದು ಕೊನೆಗೊಳ್ಳಲಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ – 2 ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೇ 18ರಂದು ಪರೀಕ್ಷೆ ಆರಂಭವಾಗಿ ಮೇ 25 ರಂದು ಕೊನೆಗೊಳ್ಳಲಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:42 pm, Sat, 20 September 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು