SSLC And PUC Exam Time Table: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

SSLC And 2nd PUC Exam Date Announced: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025ನೇ ಸಾಲಿನ ಎಸ್ಎಸ್ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಡಿಸೆಂಬರ್​​ನಲ್ಲಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಇದೀಗ ಫೈನಲ್​ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಯಾವ ದಿನ, ಯಾವ ಪರೀಕ್ಷೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

SSLC And PUC Exam Time Table: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
Sslc And Puc Time Table
Follow us
ರಮೇಶ್ ಬಿ. ಜವಳಗೇರಾ
|

Updated on:Jan 10, 2025 | 4:50 PM

ಬೆಂಗಳೂರು, (ಜನವರಿ 10): 2025ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ ಎಂದು

ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ಹಾಗೂ ಮಾರ್ಚ್​ 20 ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಲ್ಲದೇ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 16ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

SSLC ಪರೀಕ್ಷೆ -1 ವೇಳಾಪಟ್ಟಿ ಇಂತಿದೆ

  • ಮಾರ್ಚ್ 21- ಪ್ರಥಮ ಭಾಷೆ
  • ಮಾರ್ಚ್ 24- ಗಣಿತ
  • ಮಾರ್ಚ್ 26- ದ್ವಿತೀಯ ಭಾಷೆ
  • ಮಾರ್ಚ್ 29- ಸಮಾಜ ವಿಜ್ಞಾನ
  • ಏಪ್ರಿಲ್ 2- ವಿಜ್ಞಾನ
  • ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

  • ಮಾರ್ಚ್ 1- ಕನ್ನಡ, ಅರೇಬಿಕ್
  • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
  • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
  • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.
  • ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
  • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
  • ಮಾರ್ಚ್ 13- ಅರ್ಥಶಾಸ್ತ್ರ.
  • ಮಾರ್ಚ್ 15- ಇಂಗ್ಲಿಷ್.
  • ಮಾರ್ಚ್ 17- ಭೂಗೋಳಶಾಸ್ತ್ರ.
  • ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.
  • ಮಾರ್ಚ್ 20- ಹಿಂದಿ.

Published On - 4:38 pm, Fri, 10 January 25

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ