ಬೆಂಗಳೂರು, (ಜನವರಿ 10): 2025ನೇ ಸಾಲಿನ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ -1 ನಡೆಯಲಿವೆ ಎಂದು
ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ಹಾಗೂ ಮಾರ್ಚ್ 20 ರಿಂದ ಏಪ್ರಿಲ್ 2ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಲ್ಲದೇ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 16ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
Published On - 4:38 pm, Fri, 10 January 25