Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್

| Updated By: ganapathi bhat

Updated on: Aug 09, 2021 | 4:00 PM

KSEEB Class 10 Result 2021 in Kannada: ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು.

Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು (SSLC Result 2021) ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. ಇಂದು (ಆಗಸ್ಟ್ 9) 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಕೊರೊನಾ ನಡುವೆ ಪರೀಕ್ಷೆ ಸಂಘಟಿಸಿದ ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ನೂತನ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರದಲ್ಲಿ ಎಲ್ಲೂ ಮಾಡದ ಸಾಧನೆ ನಾವು ಮಾಡಿದ್ದೇವೆ. ಮಕ್ಕಳ ಭವಿಷ್ಯಕ್ಕೆ ಪರೀಕ್ಷೆ ಬೇಕು ಎಂದು ಪರೀಕ್ಷೆ ಸಂಘಟನೆ ಹಾಗೂ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ. ಸುಮಾರು 8 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆ ಬರೆದಿದ್ದಾರೆ. ಹೆತ್ತವರು ಕೂಡ ಸಹಕರಿಸಿದ್ದಾರೆ. ಎಸ್​ಒಪಿ ಸಂಪೂರ್ಣ ಪಾಲಿಸಿ, ಕೊರೊನಾ ನಿಯಮಾವಳಿ ಧಕ್ಕೆ ಆಗದಂತೆ ಅಧಿಕಾರಿ ವರ್ಗ, ಶಿಕ್ಷಕರು ಸಹಕರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಫಲಿತಾಂಶದ ವಿವರಗಳು ಇಲ್ಲಿದೆ:
ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. sslc.Karnataka.gov.in ನಲ್ಲಿ ಎಸ್‌ಎಸ್ಎಲ್‌ಸಿ ರಿಸಲ್ಟ್ ಲಭ್ಯವಿದೆ. 4,70,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610, ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.

625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು, 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು, 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಔಟ್ ಆಫ್ ಔಟ್ ಅಂಕ ಪಡೆದ ಮಕ್ಕಳ ಸಂಖ್ಯೆ:
ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು, ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆ.

ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಮೊನ್ನೆಯೇ ಬರಬೇಕಾಗಿತ್ತು. ಕಾರಣಾಂತರಗಳಿಂದ ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡುತ್ತಿದ್ದೇವೆ. 1 ವರ್ಷದಿಂದ ಶಾಲೆ ಇಲ್ಲದೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಅಂತ ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ. ಆರಂಭದಲ್ಲಿ ಸ್ವಲ್ಪ ರಿಸ್ಕ್ ಇದ್ದರೂ ಅದನ್ನು ಎದುರಿಸುತ್ತೇವೆ ಎಂದು ಶಿಕ್ಷಣ ಸಚಿವರು ಟಿವಿ9 ಗೆ ತಿಳಿಸಿದ್ದಾರೆ.

ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು. SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಲಿದ್ದಾರೆ. ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಫಲಿತಾಂಶ ನೋಡುವುದು ಹೇಗೆ ಎಂದು ಮಾಹಿತಿಯನ್ನು ಇಲ್ಲಿ ಪಡೆಯಿರಿ:
SSLC Results 2021: ಆಗಸ್ಟ್ 9, ಸೋಮವಾರ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

ಇದನ್ನೂ ಓದಿ: Karnataka SSLC Result: ಇಂದು ಮಧ್ಯಾಹ್ನ 3.30ಕ್ಕೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಗೊಂದಲ ಬೇಡ ಈ ಅಂಶಗಳನ್ನು ನೆನಪಿಡಿ

(Karnataka SSLC Class 10 Result 2021 Check KSEEB Board Class 10 Result online at kseeb.kar.nic.in and karresults.nic.in pass percentage toppers news in Kannada)

Published On - 3:42 pm, Mon, 9 August 21