AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ

KSEEB Class 10 Result 2021 Toppers List: ಇಂದು (ಆಗಸ್ಟ್ 9) 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on:Aug 09, 2021 | 4:25 PM

Share

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು (SSLC Result 2021) ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. ಇಂದು (ಆಗಸ್ಟ್ 9) 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. sslc.Karnataka.gov.in ನಲ್ಲಿ ಎಸ್‌ಎಸ್ಎಲ್‌ಸಿ ರಿಸಲ್ಟ್ ಲಭ್ಯವಿದೆ. 4,70,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610. ಹಾಗೂ ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.

625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು, 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು, 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಔಟ್ ಆಫ್ ಔಟ್ ಅಂಕ ಪಡೆದ ಮಕ್ಕಳ ಸಂಖ್ಯೆ: ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು, ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ; ಯಾರು ಟಾಪರ್ಸ್? ಇಲ್ಲಿದೆ ವಿವರ:

  • ಆದ್ಯಾ ಕೆ.ವಿ. 625ಕ್ಕೆ 625 ಅಂಕ
  • ಅಭಿಷೇಕ್​ ಜಯಂತ್​ 625ಕ್ಕೆ 625
  • ಅದಿತಿ ಆರ್​​ 625ಕ್ಕೆ 625
  • ಜ್ಯೋತಿಕಾ 625ಕ್ಕೆ 625 ಅಂಕ
  • ಕೆ.ವಿ.ಆದ್ಯಾ, ಅಭಿಷೇಕ್​ ಜಯಂತ್, ಅದಿತಿ.ಆರ್​​, ಜ್ಯೋತಿಕಾ ಸೇರಿದಂತೆ 157 ವಿದ್ಯಾರ್ಥಿಗಳಿಗೆ 625 ಅಂಕ ಲಭಿಸಿದೆ.

ಎ. ಜ್ಯೋತಿಕಾ – ಬೆಂಗಳೂರಿನ ತುಮಕೂರು ರಸ್ತೆ ವಿಡಿಯಾ ಪೂರ್ಣಪ್ರಜ್ಞಾ ಶಾಲೆ, ಅಭಯಚಂದ್ರ ಸಿ – ಬೆಂಗಳೂರಿನ ರಾಜಾಜಿನಗರದ ವಿವಿಎಸ್‌ ಸರ್ದಾರ್ ಪಟೇಲ್ ಶಾಲೆ, ಅಭೀಶಾ ಭಟ್ – ಶಿವಮೊಗ್ಗ ಜಿಲ್ಲೆ ಸಾಗರದ ಶ್ರೀಂ ರಾಮಕೃಷ್ಣ ಇಂಗ್ಲಿಷ್ ಮೀಡಿಯಾ ಸ್ಕೂಲ್ ಸೇರಿದಂತೆ 157 ವಿದ್ಯಾರ್ಥಿಗಳು SSLCಯಲ್ಲಿ 625ಕ್ಕೆ 625 ಅಂಕ ಗಳಿಸಿದ್ದಾರೆ.

SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಲಿದ್ದಾರೆ. ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಫಲಿತಾಂಶ ನೋಡುವುದು ಹೇಗೆ ಎಂದು ಮಾಹಿತಿಯನ್ನು ಇಲ್ಲಿ ಪಡೆಯಿರಿ:

SSLC Results 2021: ಇಂದು ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

(Karnataka SSLC Class 10 Result 2021 Check KSEEB Board Class 10 Result online Toppers List Toppers News in Kannada)

Published On - 4:05 pm, Mon, 9 August 21

ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ