AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2023: ಮೇ 08 ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಪರಿಶೀಲಿಸುವ ಕ್ರಮ ಹೇಗೆ? ಇಲ್ಲಿದೆ ಓದಿ

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ​ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ಎಸ್​ಎಸ್​ಎಲ್​ಸಿ ಫಲಿತಾಂಶವು ನಾಳೆ (ಮೇ 08) ಬೆಳಿಗ್ಗೆ10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್​ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Karnataka SSLC Result 2023: ಮೇ 08 ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಪರಿಶೀಲಿಸುವ ಕ್ರಮ ಹೇಗೆ? ಇಲ್ಲಿದೆ ಓದಿ
ಕರ್ನಾಟಕ SSLC ಫಲಿತಾಂಶ 2023
ನಯನಾ ಎಸ್​ಪಿ
|

Updated on:May 07, 2023 | 4:31 PM

Share

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEEB) ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ 2023 (Karnataka SSLC Result 2023) ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದ್ದು, ನಾಳೆ (May 08) ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್​ಸೈಟ್ ಅಲ್ಲಿ ಫಲಿತಾಂಶ ಪ್ರಕಟವಾಗಲಿದೆ. sslc.karnataka.gov.in ಮತ್ತು kseab.karnataka.gov.in. ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.

KSEEB 2023 ರ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 28ನೇ ಮಾರ್ಚ್‌ ರಿಂದ 11ನೇ ಏಪ್ರಿಲ್ 2023 ರವರೆಗೆ ನಡೆಸಿತು. ಉತ್ತರದ ಕೀಯನ್ನು ಏಪ್ರಿಲ್ 17 ರಂದು ಮಂಡಳಿಯು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಕೀಯ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಅನುಮತಿಸಲಾಗಿದೆ. ವಿದ್ಯಾರ್ಥಿಗಳು ಹಂಚಿಕೊಂಡ ಮಾನ್ಯ ಪ್ರಾತಿನಿಧ್ಯಗಳ ಆಧಾರದ ಮೇಲೆ KSEEEB ಅಂತಿಮ ಉತ್ತರದ ಕೀಯನ್ನು ಸಿದ್ಧಪಡಿಸುತ್ತದೆ ಮತ್ತು ಫಲಿತಾಂಶವು ಅಂತಿಮ ಉತ್ತರದ ಕೀಯನ್ನು ಆಧರಿಸಿರುತ್ತದೆ.

ಕಳೆದ ವರ್ಷ, ಒಟ್ಟು 8,53,436 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡರು, ಅದರಲ್ಲಿ 7,30,881 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಒಟ್ಟಾರೆ ಉತ್ತೀರ್ಣ ಶೇಕಡಾವಾರು ಶೇಕಡಾ 89.36 ರಷ್ಟು KSEAB ದಾಖಲಿಸಿದೆ. SSLC ಫಲಿತಾಂಶ 2022 ರಲ್ಲಿ, ಹುಡುಗಿಯರು ಹುಡುಗರಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ 90.29 ರಷ್ಟು ದಾಖಲಾಗಿದ್ದರೆ, ಬಾಲಕರ ಉತ್ತೀರ್ಣ ಪ್ರಮಾಣ ಶೇ 81.30 ರಷ್ಟಿದೆ.

ಕರ್ನಾಟಕ SSLC ಫಲಿತಾಂಶ 2023: ಪರಿಶೀಲಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್-sslc.karnataka.gov.in ಗೆ ಹೋಗಿ
  • ಕಾಣಿಸಿಕೊಂಡ ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹೊಸ ಲಾಗಿನ್ ಪುಟ ತೆರೆಯುತ್ತದೆ
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ
  • ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ
  • ಭವಿಷ್ಯದ ಉಲ್ಲೇಖಗಳ ಪ್ರಿಂಟ್ ಔಟ್ ತೆಗೆದುಕೊಳ್ಳಿ

SSLC ಅಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಪ್ರದಾಯಿಕ ವಿಜ್ಞಾನ, ವಾಣಿಜ್ಯ, ಕಲೆ ಆಯ್ಕೆಗಳನ್ನು ಹೊರತುಪಡಿಸಿ ವಿವಿಧ ಆಯ್ಕೆಗಳನ್ನು ಅನ್ವೇಷಿಸಬಹುದು. ವೃತ್ತಿಪರ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಕೋರ್ಸ್‌ಗಳು, ಕ್ರೀಡಾ ಶಿಕ್ಷಣ, ರಕ್ಷಣಾ ಸೇವೆಗಳು, ಉದ್ಯಮಶೀಲತೆ ಆಯ್ಕೆಗಳನ್ನು ಪರಿಶೀಲಿಸಬಹುದು. ಅಲ್ಲದೆ ವಿದ್ಯಾರ್ಥಿಗಳು ವೃತ್ತಿ ಸಲಹೆಗಾರರಿಂದ ಮಾರ್ಗದರ್ಶನ ಪಡೆದು, ವಿವಿಧ ಆಯ್ಕೆಗಳನ್ನು ಸಂಶೋಧಿಸಬಹುದು.

ಇದನ್ನೂ ಓದಿ: 10ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಚಿಂತೆ ಬೇಡ; ಮುಂದೇನು ಮಾಡಬಹುದು ಎಂಬದಕ್ಕೆ ಇಲ್ಲಿದೆ ಉತ್ತಮ ಸಲಹೆ

ಅಕಸ್ಮಾತ್ SSLC ಪರೀಕ್ಷೆಯಲ್ಲಿ ಫೇಲ್ ಆದರೆ ಚಿಂತಿಸದೆ, ದೃತಿ ಕೆಡದೆ ವಿದ್ಯಾರ್ಥಿಗಳು ಯಾವುದೇ ದುಡುಕು ನಿರ್ಧಾರವನ್ನು ತೆಗೆದುಕೊಳ್ಳಬಾರದು. ಅನುತ್ತೀರ್ಣರಾದರು ವಿದ್ಯಾರ್ಥಿಗಳಿಗೆ ಹಲವಾರು ಆಯ್ಕೆಗಳಿವೆ ಎಂಬುದನ್ನು ನೆನಪಿಟ್ಟುಕೊಳ್ಳಿ. ಮೊದಲು ಭರವಸೆ ಕಳೆದುಕೊಳ್ಳದೆ ಪರಿಸ್ಥಿತಿಯನ್ನು ವಿಶ್ಲೇಷಿಸಿ, ನಂತರ ಪರ್ಯಾಯ ಶಿಕ್ಷಣ ಆಯ್ಕೆಗಳನ್ನು ಅನ್ವೇಷಿಸಿ, ಪೂರಕ ಪರೀಕ್ಷೆಗೆ ತಯಾರಿ ಪ್ರಾರಂಭಿಸಿ.

Published On - 2:58 pm, Sun, 7 May 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ