Karnataka SSLC Exam Result-2: ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

|

Updated on: Jul 10, 2024 | 12:30 PM

ಎಸ್​​ಎಸ್​ಎಲ್​​ಸಿ ಪರೀಕ್ಷೆ-2ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಫಲಿತಾಂಶ ಇದೀಗ ಪ್ರಕಟವಾಗಿದೆ. ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ, ಆನ್​ಲೈನ್​​ನಲ್ಲಿ ಅಂಕಪಟ್ಟಿ ಡೌನ್​ಲೋಡ್​ ಹೇಗೆಂಬ ಮಾಹಿತಿ ಜತೆಗೆ, ರಿಸಲ್ಟ್​​ ಅಪ್​ಡೇಟ್​​ಗೆ ಮುಂದೆ ಓದಿ.

Karnataka SSLC Exam Result-2: ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
Follow us on

ಬೆಂಗಳೂರು, ಜುಲೈ 10: ಕರ್ನಾಟಕ ಎಸ್​ಎಸ್​ಎಲ್​​ಸಿ ಪರೀಕ್ಷೆ-2ರ ಫಲಿತಾಂಶ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಈ ವರ್ಷ 2ನೇ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಮತ್ತು karresults.nic.in ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ ಮತ್ತು ಫಲಿತಾಂಶದ ಲಿಂಕ್ ಅನ್ನು ತೆರೆದ ನಂತರ, ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ (DOB) ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್ 14 ಮತ್ತು ಜೂನ್ 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಜೂನ್​ 14 ರಿಂದ 21ರವರಗೆ ಕರ್ನಾಟಕದ 724 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆಗಳು ನಡೆದಿದ್ದವು. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಸುಮಾರು 13,085 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳುವುದಕ್ಕಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನು ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

ಆನ್​ಲೈನ್​ನಲ್ಲಿ ಫಲಿತಾಂಶ ನೋಡುವುದು ಹೇಗೆ?

  • ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ.
  • ವೆಬ್‌ಸೈಟ್‌ನ ಹೋಮ್​ ಪೇಜ್​ನಲ್ಲಿ Karnataka SSLC Supplementary Result 2024 ಲಿಂಕ್ ಕಾಣಿಸುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಲಾಗ್ ಇನ್ ಆಗಲು ಕೇಳಲಾದ ವಿವರಗಳನ್ನು ನಮೂದಿಸಿ.
  • ವಿವರಗಳನ್ನು ಸಲ್ಲಿಸಲು ಎಂಟರ್ ಒತ್ತಿರಿ.
  • ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ.

ಇದನ್ನೂ ಓದಿ: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಶಾಕ್ ನೀಡಿದ ಜ್ಞಾನಭಾರತಿ, ಬೆಂಗಳೂರು ನಗರ ವಿವಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:06 pm, Wed, 10 July 24