
ಬೆಂಗಳೂರು, ಜೂನ್ 13: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಶುಕ್ರವಾರದಂದು ಎಸ್ಎಸ್ಎಲ್ಸಿ (SSLC) ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 87,330 ವಿದ್ಯಾರ್ಥಿಗಳು (Students) ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಆ ಮೂಲಕ ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್ ಆಫ್ ಔಟ್ ಅಂಕ ಬಂದಿದೆ. ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್ಎಸ್ಎಲ್ ಪರೀಕ್ಷೆ-2 ನಡೆದಿತ್ತು.
ಇದನ್ನೂ ಓದಿ: SSLCಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್
ಮೇ 24ರಂದು ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದರು.
ಇದನ್ನೂ ಓದಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ
ಈ ಬಾರಿ 8,42,173 ಮಕ್ಕಳ ಪೈಕಿ 5,24,984 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು, ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದರು. ಇನ್ನು, ಶೇ.91.12ರಷ್ಟು ಫಲಿತಾಂಶದ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದು, ಎರಡನೇ ಸ್ಥಾನದಲ್ಲಿ ಉಡುಪಿ, 3ನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಇತ್ತು. ಶೇಕಡ 42 ಪರ್ಸೆಂಟ್ ಫಲಿತಾಂಶದ ಮೂಲಕ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ಕಮಾಲ್ ಮಾಡಿದ್ದರು.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:02 pm, Fri, 13 June 25