AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಶೇ. 62ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ಇರುವುದಿಲ್ಲ ಎಂದು ಅದಾಗಲೇ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. SSLC ಪರೀಕ್ಷೆ ಒಂದರಲ್ಲಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಸ್ವತಃ ಸಚಿವರೇ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ:  ಶೇ. 62 ಫಲಿತಾಂಶ
ಸಾಂದರ್ಭಿಕ ಚಿತ್ರImage Credit source: PTI
ವಿನಯ್​ ಕಾಶಪ್ಪನವರ್​
| Edited By: |

Updated on: May 30, 2026 | 5:55 PM

Share

ಬೆಂಗಳೂರು, ಮೇ 30: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 49,351 ವಿದ್ಯಾರ್ಥಿಗಳ ಪೈಕಿ 31,080 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.62 ಫಲಿತಾಂಶ ದಾಖಲಾಗಿದೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2ನ್ನು ನಡೆಸಲಾಗಿತ್ತು. ವಿಶೇಷ ಅಂದರೆ ಪರೀಕ್ಷೆ-2ರಲ್ಲಿ ಬರೋಬ್ಬರಿ 8,385 ಶಾಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯಶಸ್ವಿಯಾಗಿ ಉತ್ತಮಪಡಿಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ
  • ಮೇ 18ರಿಂದ 25ರ ವರೆಗೆ ನಡೆದಿದ್ದ ಪರೀಕ್ಷೆ
  • 49,351 ವಿದ್ಯಾರ್ಥಿಗಳ ಪೈಕಿ 31,080 ಮಂದಿ ಪಾಸ್​

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 23ರಂದು ಪ್ರಕಟವಾಗಿದ್ದು, ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ಪಾಸ್​​ ಆಗಿದ್ದರು. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಉತ್ತೀರ್ಣರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿತ್ತು. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನ, ಉತ್ತರ ಕನ್ನಡ 3ನೇ ಸ್ಥಾನ (ಶೇ 98.09) ಮತ್ತು ಹಾಸನ 4ನೇ ಸ್ಥಾನ (ಶೇ 97.51) ಗಳಿಸಿದ್ದವು.

ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ; ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ

ಈ ಬಾರಿ ಇಲ್ಲ ಮೂರನೇ ಪರೀಕ್ಷೆ

ಈ ಬಾರಿ ಎಸ್ಎಸ್​ಎಲ್​​ಸಿ ಮೂರನೇ ಪರೀಕ್ಷೆ ಇರುವುದಿಲ್ಲ. ಈ ಬಗ್ಗೆ ಏಪ್ರಿಲ್ 23ರಂದು ನಡೆದ ಸುದ್ದಿಗೋಷ್ಠಿಯಲ್ಲಿಯೇ ಅಂದಿನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದರು. SSLC ಪರೀಕ್ಷೆ ಒಂದರಲ್ಲಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ತಿಳಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್