Karnataka SSLC Exam 2022 Result: ಮೇ 3ನೇ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ 2022: ಮೇ 3ನೇ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗುವುದಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೊಷ್ಠಿ ನಡೆಸಿದ ಅವರು, ಮೇ 21, 22ರಂದು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ.
ಬೆಂಗಳೂರು: ಮೇ 3ನೇ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗುವುದಾಗಿ ಬೆಂಗಳೂರಿನಲ್ಲಿ ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೊಷ್ಠಿ ನಡೆಸಿದ ಅವರು, ಮೇ 21, 22ರಂದು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 1,00683 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ನಡೆಯಲಿದೆ. ಪರೀಕ್ಷೆಗೆ ಸೂಕ್ತ ಕ್ರಮಗಳ ಬಗ್ಗೆ ಗೃಹ ಇಲಾಖೆ ಜೊತೆ ಚರ್ಚಿಸಿದ್ದೇವೆ. ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ವಸ್ತು ಒಯ್ಯುವಂತಿಲ್ಲ. ಮೊಬೈಲ್, ವಾಚ್, ಎಲೆಕ್ಟ್ರಾನಿಕ್ ಡಿವೈಸ್ಗೆ ಅವಕಾಶ ಇರಲ್ಲ. ಪ್ರಶ್ನೆಪತ್ರಿಕೆ ಗೌಪ್ಯತೆ, ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಪ್ರತಿ ಕೇಂದ್ರದಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಕ್ಯಾಮರಾ ಅಳವಡಿಸಿಕೊಳ್ಳಲಾಗಿದೆ. ಪರೀಕ್ಷೆಗೆ ಯಾವುದೇ ಡ್ರೆಸ್ ಕೋಡ್ ನಿಗದಿಪಡಿಸಿಲ್ಲ. ಪರೀಕ್ಷಾ ಕೇಂದ್ರದ ಪ್ರವೇಶಕ್ಕೆ ಕೆಲವೆಡೆ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದ ಶಾಲೆಗಳ ಶಿಕ್ಷಕರನ್ನು ಅದೇ ಕೇಂದ್ರಕ್ಕೆ ನೇಮಿಸಲ್ಲ. ಪರೀಕ್ಷಾ ಅಧಿಕಾರಿಗಳಾಗಿ ಅವರಿರುವ ಕೇಂದ್ರಕ್ಕೆ ಬಳಸಿಕೊಳ್ಳುವುದಿಲ್ಲ. ಪರೀಕ್ಷಾ ಕೇಂದ್ರದ 100 ಮೀ. ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತೆ. ಮೇ 14ರಂದು ಪರೀಕ್ಷಾ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಬಿ.ಸಿ.ನಾಗೇಶ್ ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:31 pm, Tue, 10 May 22