SSLC Key Answers: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ, ಚೆಕ್ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ
ಮಾರ್ಚ 31 ರಿಂದ ಏಪ್ರಿಲ್ 15ರವೆಗೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಏ.17) ಪ್ರಕಟಿಸಿದೆ.
ಬೆಂಗಳೂರು: ಮಾರ್ಚ 31 ರಿಂದ ಏಪ್ರಿಲ್ 15ರವೆಗೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ (SSLC Exam) ಮಾದರಿ ಉತ್ತರಗಳನ್ನು (Key Answers) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಏ.17) ಪ್ರಕಟಿಸಿದೆ. ವಿದ್ಯಾರ್ಥಿಗಳು ಮಾದರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ kseab.karnataka.gov.in ನಲ್ಲಿ ಪರಿಶೀಲಿಸಿ ಹಾಗೇ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಮಾತ್ರ ಆಕ್ಷೇಪ ಸಲ್ಲಿಸಬಹುದಾಗಿದೆ.
ಮಾದರಿ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನ
ಹಂತ 1: ಇಲಾಖೆಯ ಅಧಿಕೃತ ವೆಬ್ಸೈಟ್ kseab.karnataka.gov.in ಭೇಟಿ ನೀಡಿ
ಹಂತ 2: ಮುಖಪುಟದಲ್ಲಿ ನಿಮಗೆ ಮಾದರಿ ಉತ್ತರಗಳಿಗಾಗಿ ಮತ್ತು ಆಕ್ಷೇಪಣೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಎಂದು ಕಾಣ ಸಿಗಲಿದ್ದು, ಅದರ ಮೇಲೆ ಕ್ಲಿಕ್ ಮಾಡಿ
ಹಂತ 3: ಎಸ್ಎಸ್ಎಲ್ಸಿ 2023 ಮಾದರಿ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಅಂತ ಕಾಣಸಿಗುತ್ತೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ 4: ಆಗ ಕರ್ನಾಟಕ ಎಸ್ಎಸ್ಎಲ್ಸಿ ಮಾದರಿ ಉತ್ತರ 2023 ಪುಟ ತೆರೆಯುತ್ತದೆ.
ಹಂತ 5: ನಂತರ ನೀವು ವಿಚಯವಾರು ಮಾದರಿ ಉತ್ತರಗಳನ್ನು ತಿಳಿದುಕೊಳ್ಳಬಹುದು
ಹಂತ 6: ಬಳಿಕ ಮಾದರಿ ಉತ್ತರಗಳ ಪಿಡಿಎಫ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಮಾದರಿ ಉತ್ತರಗಳನ್ನು ನೋಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://kseeb.karnataka.gov.in/objectionentry/SSLC_KeyAnswers
ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಈಗಾಗಲೆ ಆರಂಭವಾಗಿದ್ದು, ಮೇ ತಿಂಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.
Published On - 12:51 pm, Mon, 17 April 23