AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2021: ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್ಎಸ್ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ

SSLC Results 2021: ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 09, 2021 | 3:48 PM

Share

Karnataka SSLC Result 2021 | ಆಗಸ್ಟ್ 9, ಇಂದು ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದ್ದಾರೆ. (BC Nagesh) ಸೋಮವಾರ ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿತ್ತು. ಅಲ್ಲಿ ಫಲಿತಾಂಶ (SSLC Results 2021) ಪ್ರಕಟಣೆಯಾಗಿದೆ. ಈಬಾರಿಯ ಎಸ್ಎಸ್ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್ಎಸ್ಎಲ್​ಸಿ ಪರೀಕ್ಷೆ ನಡೆದಿತ್ತು. ಈಬಾರಿಯ ಎಸ್ಎಸ್ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್ಎಸ್ಎಲ್ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ 6. ತಾತ್ಕಾಲಿಕ ಅಂಕಪಟ್ಟಿ ಆನ್ಲೈನ್ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ? ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

ಈ ವೆಬ್ಸೈಟ್ಗಳಲ್ಲಿ ಫಲಿತಾಂಶ ವೀಕ್ಷಿಸಿ sslc.karnataka.gov.in kseeb.kar.nic.in karresults.nic.in

ಕರ್ನಾಟಕದಲ್ಲಿ 12 ಲಕ್ಷ ಪಿಯುಸಿ ಸೀಟ್​ಗಳು ಲಭ್ಯವಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಲಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಪಿಯುಸಿಗೆ ಸೀಟ್​ಗಳು ಸಿಗಲಿವೆ.  ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.

ಇದನ್ನೂ ಓದಿ: Karnataka SSLC Result 2021 Live: ವಿದ್ಯಾರ್ಥಿಗಳೇ ಗಮನಿಸಿ; ಕೆಲವೇ ಹೊತ್ತಿನಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

(Karnataka SSLC exam results 2021 will announce tomorrow here is the steps to see result)

Published On - 9:50 pm, Sun, 8 August 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?