Karnataka SSLC Exam: ಮಾರ್ಚ್ 31ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತಮುತ ನಿಷೇಧಾಜ್ಞೆ ಜಾರಿ

|

Updated on: Mar 22, 2023 | 8:40 PM

ರಾಜ್ಯಾದ್ಯಂತ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Karnataka SSLC Exam: ಮಾರ್ಚ್ 31ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತಮುತ ನಿಷೇಧಾಜ್ಞೆ ಜಾರಿ
ಪ್ರಾತಿನಿಧಿಕ ಚಿತ್ರ
Image Credit source: asianetnews.com
Follow us on

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್​ಎಸ್​ಎಲ್​ಸಿ (Karnataka SSLC Exams) ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory) ಜಾರಿಗೊಳಿಸಲಾಗಿದೆ. ಜೆರಾಕ್ಸ್​ ಅಂಗಡಿ, ಸೈಬರ್ ಸೆಂಟರ್​ ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 31-03-23 ರಿಂದ 15-04-23 ರವರೆಗೆ ಪರೀಕ್ಷೆ ನಡೆಯಲಿದ್ದು,  ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ  ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ.

ಮಾರ್ಚ್ 20 ರಿಂದ 28 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7:30ರ ವರೆಗೆ ಹಾಗೂ ಮಾರ್ಚ್ 26ರಂದು ಬೆಳಗ್ಗೆ 11 ಗಂಟೆಯಿಂದ 6 ಗಂಟೆಯವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಪರೀಕ್ಷೆ ಬಗ್ಗೆ ಗೊಂದಲ, ಸಂದೇಹಗಳು ಇದ್ದರೆ ಮೇಲೆ ನೀಡಲಾಗಿರುವ ಸಹಾಯವಾಣಿಯನ್ನು ಸದುಪಯೋಗ ಪಡೆದುಕೊಳ್ಳಲು ಶಿಕ್ಷಣ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ: SSLC Exams: ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ ಸಹಾಯವಾಣಿ, ಪರೀಕ್ಷೆ ಬಗ್ಗೆ ಏನೇ ಗೊಂದಲಗಳಿದ್ದರೆ ಕರೆ ಮಾಡಿ

10ನೇ ತರಗತಿಯವರೆಗೆ (ಎಸ್​ಎಸ್​ಎಲ್​ಸಿ) ಸರ್ಕಾರ ನಿಗದಿಪಡಿಸಿರುವ ಪಠ್ಯಕ್ರಮವನ್ನಷ್ಟೇ ಓದಿ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಮುಗಿದ ನಂತರ ಯಾವ ವಿಭಾಗ ಆರಿಸಿಕೊಳ್ಳಬೇಕೆಂಬ ಗೊಂದಲಕ್ಕೆ ಒಳಗಾಗುತ್ತಾರೆ. ವಾಣಿಜ್ಯ (Commerce), ವಿಜ್ಞಾನ (Science) ಮತ್ತು ಕಲಾ (Arts) ವಿಭಾಗಗಳ ಪೈಕಿ ಯಾವುದನ್ನು ಆರಿಸಿಕೊಳ್ಳಬೇಕು ಎಂಬ ಬಗ್ಗೆ ಹಲವು ಪ್ರಶ್ನೆಗಳು ಮೂಡುತ್ತವೆ.

ಇದನ್ನೂ ಓದಿ:  SSLC Exam: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣ ಉಚಿತ

ಈ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ವಿದ್ಯಾರ್ಥಿಯ ವಿದ್ಯಾಭ್ಯಾಸವಷ್ಟೇ ಅಲ್ಲ, ವೃತ್ತಿ ಭವಿಷ್ಯವನ್ನೂ ನಿರ್ಧರಿಸಲಿದೆ. ಹೀಗಾಗಿ ಯಾವ ವಿಭಾಗ ಆರಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿ ಆಪ್ತಸಮಾಲೋಚನೆ ಮಹತ್ವದ ಪಾತ್ರ ನಿರ್ವಹಿಸುತ್ತದೆ.

SSLC ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ ಇಂತಿದೆ

  1. ಮಾರ್ಚ್‌ 31-ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ
  2. ಏಪ್ರಿಲ್‌ 3-ಗಣಿತ ಹಾಗೂ ಸಮಾಜ ಶಾಸ್ತ್ರ
  3. ಏಪ್ರಿಲ್‌ 6-ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
  4. ಏಪ್ರಿಲ್‌ 8-ಅರ್ಥಶಾಸ್ತ್ರ, ಏಪ್ರಿಲ್‌ 10-ವಿಜ್ಞಾನ, ರಾಜ್ಯಶಾಸ್ತ್ರ
  5. ಏಪ್ರಿಲ್‌ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ
  6. ಏಪ್ರಿಲ್‌ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ

KSRTC ಬಸ್​ನಲ್ಲಿ ಉಚಿತ ಪ್ರಯಾಣ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಘೋಷಿಸಿದೆ. ಮಾರ್ಚ್ 31ರಿಂದ ರಾಜ್ಯದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 15ರ ವರೆಗೆ ನಡೆಯಲಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸಬಹುದು.
ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮ ತಿಳಿಸಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್​ ನಿಲುಗಡೆ ನೀಡುವಂತೆ ಮತ್ತು ಕೋರಿಕೆಯ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 pm, Wed, 22 March 23