SSLC Exam 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

|

Updated on: May 09, 2024 | 4:01 PM

SSLC Examination 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶ ಪ್ರಕಟಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅನುತ್ತೀರ್ಣರಾದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ (SSLC Examination 2) ವೇಳಾಪಟ್ಟಿ ಬಿಡುಗಡೆಯಾಗಿದೆ. ಪರೀಕ್ಷೆ ವೇಳಾಪಟ್ಟಿ ಹಾಗೂ ಪರೀಕ್ಷೆ ಸೂಚನೆಗಳು ಈ ಕೆಳಗಿನಂತಿವೆ.

SSLC  Exam 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, (ಮೇ 09): 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಇಂದು(ಮೇ 09) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಇದೀಗ ಅನುತ್ತೀರ್ಣರಾದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ (SSLC Examination 2) ವೇಳಾಪಟ್ಟಿ ಬಿಡುಗಡೆಯಾಗಿದೆ.  ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಚಿಂತೆ ಮಾಡಬೇಡಿ. ಯಾಕೆಂದರೆ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿ (SSLC 2 Exam Time Table) ಪ್ರಕಟಿಸಿದ್ದು, ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು (SSLC 2 Exam Time Table) ನಡೆಯಲಿವೆ. ಇನ್ನೂ ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಹೀಗಿದೆ

  • 7-6-2024- ಪ್ರಥಮ ಭಾಷೆ
  • 8-6-2024- ತೃತೀಯ ಭಾಷೆ
  • 10-6-2024- ಗಣಿತ, ಸಮಾಜ ಶಾಸ್ತ್ರ
  • 11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
  • 12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
  • 13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
  • 14-6-2024 – ಸಮಾಜ ವಿಜ್ಞಾನ

ಇದನ್ನೂ ಓದಿ: education Tips in Kannada : SSLC ನಂತರ ಯಾವ ಕೋರ್ಸ್​​​​​ ಆಯ್ಕೆ ಮಾಡಿಕೊಳ್ಳಬೇಕು? ಈ ಕೋರ್ಸ್​​​ ಉತ್ತಮ

ಪರೀಕ್ಷೆ ಸೂಚನೆಗಳು ಹೀಗಿವೆ

ಜೂನ್‌ 15ರಂದು ಜೆಟಿಎಸ್‌ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು. ಸಬ್ಜೆಕ್ಟ್‌ ಕೋಡ್‌ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.

ವಿವಿಧ ಪ್ರಕಾರದ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಬರಹಗಾರರ ಸೌಲಭ್ಯ ಅಥವಾ ಹೆಚ್ಚುವರಿ ಸಮುಯದ ಅಥವಾ ಎರಡನ್ನೂ ಪಡೆಯುವ ಅವಕಾಶವಿದೆ. ಈ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿಯಾಗಿ 30 ನಿಮಿಷಗಳನ್ನು ನೀಡಲಾಗುವುದು.

ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1:15ರವರೆಗೆ ಅವಧಿ ನಿಗದಿಪಡಿಸಿದೆ. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ. ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Thu, 9 May 24